ಪ್ರಧಾನ ಮಂತ್ರಿಯವರ ಕಛೇರಿ

ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟದಿಂದ ಕಾರ್ಮಿಕರ ಸಾವು: ಪ್ರಧಾನ ಮಂತ್ರಿ ಮೋದಿ ಸಂತಾಪ 


ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಧನಸಹಾಯ ಘೋಷಣೆ 

Posted On: 22 AUG 2024 6:56AM by PIB Bengaluru

ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿರುವ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದ ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿರುವ ದುರ್ಘಟನೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. 

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ. 

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿರುವ ಪ್ರಧಾನ ಮಂತ್ರಿ ಕಾರ್ಯಾಲಯವು,

“ಅನಕಪಲ್ಲಿಯ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅವಘಡದಿಂದ ಕಾರ್ಮಿಕರ ಪ್ರಾಣಹಾನಿ ಸುದ್ದಿ ಕೇಳಿ ಮನಸ್ಸಿಗೆ ನೋವಾಗಿದೆ. ತಮ್ಮ ಕುಟುಂಬದವರು, ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳನ್ನು ಹೇಳುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸುತ್ತೇನೆ'' ಎಂದು ಪ್ರಧಾನ ಮಂತ್ರಿಗಳು ಹೇಳಿರುವುದಾಗಿ  ತಿಳಿಸಿದೆ.

 

 

*****



(Release ID: 2047591) Visitor Counter : 15