ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ

प्रविष्टि तिथि: 23 AUG 2024 10:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಭಾರತೀಯ ರಾಯಭಾರ ಕಚೇರಿಯು ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಅವರು ಭರವಸೆ ನೀಡಿದರು.

ಶ್ರೀ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ:

"ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಯಾಗಿರುವುದು ಬಹಳ ದುಃಖದ ಸಂಗತಿಯಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಭಾರತೀಯ ರಾಯಭಾರ ಕಚೇರಿಯು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯ ಸಹಾಯವನ್ನು ಒದಗಿಸುತ್ತಿದೆ" ಎಂದು ಬರೆದಿದ್ದಾರೆ.

 

 

*****


(रिलीज़ आईडी: 2048553) आगंतुक पटल : 63
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam