ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನ: ದೇಶದ ಜನತೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ 

ಪ್ರಕಟಣಾ ದಿನಾಂಕ: 23 AUG 2024 9:39AM by PIB Bengaluru

ಇಂದು ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ. 

ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಸಂದೇಶದಲ್ಲಿ ಪ್ರಧಾನ ಮಂತ್ರಿಗಳು, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಗಮನಾರ್ಹ ಸಾಧನೆಗಳ ಬಗ್ಗೆ ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದಾರೆ. 

“ಇಂದು ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು. ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ರಾಷ್ಟ್ರದ ಸಾಧನೆಗಳನ್ನು ನಾವು ಬಹಳ ಹೆಮ್ಮೆಯಿಂದ ಸ್ಮರಿಸಿಕೊಳ್ಳುತ್ತೇವೆ. ಇದು ನಮ್ಮ ಬಾಹ್ಯಾಕಾಶ ವಿಜ್ಞಾನಿಗಳ ಕೊಡುಗೆಯನ್ನು ಶ್ಲಾಘಿಸುವ ದಿನವಾಗಿದೆ'' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬಾಹ್ಯಾಕಾಶ ಕ್ಷೇತ್ರವನ್ನು ಮುನ್ನಡೆಸಲು ಸರ್ಕಾರದ ಬದ್ಧತೆಯನ್ನು ಈ ಸಂದರ್ಭದಲ್ಲಿ ಎತ್ತಿ ತೋರಿಸಿದ ಪ್ರಧಾನಮಂತ್ರಿಗಳು, "ನಮ್ಮ ಸರ್ಕಾರವು ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರಣಿ ಭವಿಷ್ಯದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮುಂಬರುವ ದಿನಗಳಲ್ಲಿ ನಾವು ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇವೆ." ಎಂದು ಹೇಳಿದ್ದಾರೆ.

 

 

*****


(ಪ್ರಕಟಣೆ ಐ.ಡಿ.: 2048885) ವಿಸಿಟರ್ ಕೌಂಟರ್ : 74