ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜನ್ ಧನ್ ಯೋಜನೆ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು


ಜನ್ ಧನ್ ಯೋಜನೆಯು ಆರ್ಥಿಕ ಒಳಗೊಳ್ಳುವಿಕೆಯನ್ನು ಉತ್ತೇಜಿಸುವಲ್ಲಿ ಮತ್ತು ಕೋಟಿಗಟ್ಟಲೆ ಜನರಿಗೆ, ವಿಶೇಷವಾಗಿ ಮಹಿಳೆಯರು, ಯುವಕರಿಗೆ ಗೌರವವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಪ್ರಧಾನ ಮಂತ್ರಿ

Posted On: 28 AUG 2024 9:50AM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜನ್ ಧನ್ ಯೋಜನೆಯ 10ನೇ ವಾರ್ಷಿಕೋತ್ಸವ ಆಚರಣೆ ಸಂದರ್ಭದಲ್ಲಿ, ಆರ್ಥಿಕ ಸೇರ್ಪಡೆಯ ಮೇಲೆ ಜನ್ ಧನ್ ಯೋಜನೆಯ ಮಹತ್ವದ ಪ್ರಭಾವದ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರು ಜನ್ ಧನ್ ಯೋಜನೆಯ ಎಲ್ಲಾ ಫಲಾನುಭವಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು ಮತ್ತು ಈ ಯೋಜನೆಯನ್ನು ಯಶಸ್ವಿಗೊಳಿಸಿದವರಿಗೆ ಧನ್ಯವಾದಗಳನ್ನು ತಿಳಿಸಿದರು. 

ಜನ್ ಧನ್ ಯೋಜನೆಯು ಆರ್ಥಿಕ ಒಳಗೊಳ್ಳುವಿಕೆಯನ್ನು ಉತ್ತೇಜಿಸುವಲ್ಲಿ ಮತ್ತು ಕೋಟಿಗಟ್ಟಲೆ ಜನರಿಗೆ, ವಿಶೇಷವಾಗಿ ಮಹಿಳೆಯರು, ಯುವಕರು ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಘನತೆಯನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿಯವರು ತಮ್ಮ “ಎಕ್ಸ್” ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

"ಇಂದು, ನಾವು ಜನ್ ಧನ್‌ ಯೋಜನೆ ಜಾರಿಗೆ ಬಂದು 10 ವಸಂತಗಳನ್ನು ಪೂರೈಸಿದ ( #10YearsOfJanDhan )  ಮಹತ್ವದ ಸಂದರ್ಭದಲ್ಲಿದ್ದೇವೆ.


ಎಲ್ಲಾ ಫಲಾನುಭವಿಗಳಿಗೆ ಅಭಿನಂದನೆಗಳು ಮತ್ತು ಈ ಯೋಜನೆಯನ್ನು ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು. ಜನ್ ಧನ್ ಯೋಜನೆಯು ಹಣಕಾಸಿನ ಒಳಗೊಳ್ಳುವಿಕೆಯನ್ನು ಹೆಚ್ಚಿಸುವಲ್ಲಿ ಮತ್ತು ಕೋಟಿಗಟ್ಟಲೆ ಜನರಿಗೆ, ವಿಶೇಷವಾಗಿ ಮಹಿಳೆಯರು, ಯುವಕರು ಮತ್ತು ಸಮಾಜದ ಮುಖ್ಯವಾಹಿನಿಯಿಂದ ಹೊರಗುಳಿದಿದ್ದ  ಸಮುದಾಯಗಳಿಗೆ ಘನತೆಯನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ”

“आज देश के लिए एक ऐतिहासिक दिन है- #10YearsOfJanDhan. इस अवसर पर मैं सभी लाभार्थियों को शुभकामनाएं देता हूं। इस योजना को सफल बनाने के लिए दिन-रात एक करने वाले सभी लोगों को भी बहुत-बहुत बधाई। जन धन योजना करोड़ों देशवासियों, विशेषकर हमारे गरीब भाई-बहनों को आर्थिक रूप से सशक्त बनाने और उन्हें सम्मान के साथ जीवन जीने का अवसर देने में सफल रही है।” 
 

 


 

*****


(Release ID: 2049284) Visitor Counter : 57