ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಯೋಗೇಶ್ ಕಥುನಿಯಾ ಅವರನ್ನು ಅಭಿನಂದಿಸಿದ್ದಾರೆ

Posted On: 02 SEP 2024 8:15PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಫ್ರಾನ್ಸ್ ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಡಿಸ್ಕಸ್ ಥ್ರೋ ಎಫ್ 56 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಯೋಗೇಶ್ ಕಥುನಿಯಾ ಅವರನ್ನು ಅಭಿನಂದಿಸಿದ್ದಾರೆ. 

ಕಥುನಿಯಾ ಅವರ ಸಂಕಲ್ಪ, ಕಠಿಣ ಪರಿಶ್ರಮ ಮತ್ತು ಸ್ಥಿತಿಸ್ಥಾಪಕತ್ವವನ್ನು ಶ್ರೀ ಮೋದಿಯವರು ಶ್ಲಾಘಿಸಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ:
"#Paralympics2024 ಪುರುಷರ ಡಿಸ್ಕಸ್ ಥ್ರೋ ಎಫ್ 56 ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದ @YogeshKathuniyaರವರಿಗೆ ಅಭಿನಂದನೆಗಳು! ಅವರದು ದೃಢನಿಶ್ಚಯ, ಕಠಿಣ ಪರಿಶ್ರಮ ಮತ್ತು ಸ್ಥಿತಿಸ್ಥಾಪಕತ್ವದ ಅದ್ಭುತ ಪ್ರದರ್ಶನ. ಅವರ ಮುಂದಿನ ಎಲ್ಲಾ ಪ್ರಯತ್ನಗಳಿಗೆ ಶುಭ ಹಾರೈಕೆಗಳು #Cheer4Bharat" ಎಂದು ಪೋಸ್ಟ್ ಮಾಡಿದ್ದಾರೆ.

 

 

*****



(Release ID: 2051187) Visitor Counter : 21