ಪ್ರಧಾನ ಮಂತ್ರಿಯವರ ಕಛೇರಿ
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನ ಜಾವೆಲಿನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತ ಸುಮಿತ್ ಅಂತಿಲ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಅಭಿನಂದನೆ
ಪ್ರಕಟಣಾ ದಿನಾಂಕ:
03 SEP 2024 12:01AM by PIB Bengaluru
ಪ್ರಸ್ತುತ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಎಫ್ 64 ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ ಕ್ರೀಡಾಪಟು ಸುಮಿತ್ ಅಂತಿಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಸುಮಿತ್ ಅವರಿಂದ ಅಸಾಧಾರಣ ಪ್ರದರ್ಶನ! ಪುರುಷರ ಜಾವೆಲಿನ್ ಎಫ್ 64 ಸ್ಪರ್ಧೆಯಲ್ಲಿ ಚಿನ್ನದ ಪದಕದ ಜಯಿಸಿರುವುದಕ್ಕೆ ಅವರಿಗೆ ಅಭಿನಂದನೆಗಳು! ಅವರು ಮಹೋನ್ನತ ಸ್ಥಿರತೆ ಮತ್ತು ಶ್ರೇಷ್ಠತೆಯನ್ನು ಪ್ರದರ್ಶಿಸಿದ್ದಾರೆ. ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳು. @sumit_javelin #Cheer4Bharat"
*****
(ಪ್ರಕಟಣೆ ಐ.ಡಿ.: 2051233)
ವಿಸಿಟರ್ ಕೌಂಟರ್ : 77
ಪ್ರಕಟಣೆಯನ್ನು ಇದರಲ್ಲಿ ಓದಿ:
Telugu
,
English
,
Urdu
,
हिन्दी
,
Hindi_MP
,
Marathi
,
Manipuri
,
Bengali-TR
,
Bengali
,
Assamese
,
Punjabi
,
Gujarati
,
Odia
,
Tamil
,
Malayalam