ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ
azadi ka amrit mahotsav

ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್‌ ಮಾಸ 2024 ಗೆ ಚಾಲನೆ ನೀಡಿದ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಸಾವಿತ್ರಿ ಠಾಕೂರ್‌

Posted On: 04 SEP 2024 11:50AM by PIB Bengaluru

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ರಾಜ್ಯ ಸಚಿವೆ ಶ್ರೀಮತಿ ಸಾವಿತ್ರಿ ಠಾಕೂರ್ ಅವರು, 1ನೇ ಸೆಪ್ಟೆಂಬರ್, 2024 ರಂದು ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್‌ ಮಾಸ-2024 ಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಸಾವಿತ್ರಿ ಠಾಕೂರ್ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 2018ರಲ್ಲಿ ಪ್ರಾರಂಭಿಸಿದ ಈ ಅಭಿಯಾನವು ದೇಶಾದ್ಯಂತ ವಿಶೇಷವಾಗಿ ಬುಡಕಟ್ಟು ಪ್ರದೇಶಗಳಲ್ಲಿ ಅಪೌಷ್ಟಿಕತೆಯ ವಿರುದ್ಧ ಹೋರಾಡುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದೆ ಎಂದು ಹೇಳಿದರು.

ಎಲ್ಲಾ ನಾಗರಿಕರು ಈ ರಾಷ್ಟ್ರೀಯ ಪೋಷಣ್‌ ಮಾಸ 2024 ರಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ತಮ್ಮ ಮಕ್ಕಳ ಭವಿಷ್ಯವನ್ನು ಭದ್ರಪಡಿಸುವಲ್ಲಿ ಮತ್ತು ಆರೋಗ್ಯಕರ, ಸಮೃದ್ಧ ಮತ್ತು ಶಕ್ತಿಯುತ ಭಾರತದ ಸೃಷ್ಟಿಗೆ ಕೊಡುಗೆ ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕೆಂದು ಒತ್ತಾಯಿಸಿದರು.

 

ರಾಷ್ಟ್ರೀಯ ಪೋಷಣ್‌ ಮಾಸ 2024 ರ ಸಮಯದಲ್ಲಿ, ಸೆಪ್ಟೆಂಬರ್ 1 ರಿಂದ 30 ರವರೆಗೆ, ಆರೋಗ್ಯಕರ, ಸಮೃದ್ಧ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ದೇಶಾದ್ಯಂತ ಆಯೋಜಿಸುವ ಕಾರ್ಯಕ್ರಮಗಳಲ್ಲಿ ನಾವು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಮಧ್ಯಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವರು, ಇತರೆ ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

 

*****


(Release ID: 2051996) Visitor Counter : 39