ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಲಕ್ನೋದಲ್ಲಿ ದುರ್ಘಟನೆಯಲ್ಲಿ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕಂಬನಿ: ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ 

Posted On: 08 SEP 2024 1:13PM by PIB Bengaluru

ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ಕಟ್ಟಡ ಕುಸಿದು ಮೃತಪಟ್ಟವರ ಬಗ್ಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ. 

ಪ್ರಧಾನ ಮಂತ್ರಿ ಕಚೇರಿ (PMO) ಎಕ್ಸ್ ಪೋಸ್ಟ್ ನಲ್ಲಿ:

"ಉತ್ತರಪ್ರದೇಶದ ಲಕ್ನೋದಲ್ಲಿ ಕಟ್ಟಡ ಅವಘಡದಿಂದ ಸಂಭವಿಸಿದ ಜೀವಹಾನಿ ವಿಷಯ ಕೇಳಿ ಅತ್ಯಂತ ದುಃಖವಾಯಿತು. ತಮ್ಮ ಮನೆಯವರು, ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಸಂತಾಪಗಳು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು’’ ಎಂದು ಹೇಳಿದ್ದಾರೆ. PM @narendramodi

 

 

*****


(Release ID: 2052998) Visitor Counter : 52