ಗೃಹ ವ್ಯವಹಾರಗಳ ಸಚಿವಾಲಯ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು "ಶ್ರೀ ವಿಜಯ ಪುರಂ" ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ದೃಷ್ಟಿಕೋನದಿಂದ ಪ್ರೇರಿತರಾಗಿ, ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸಲು, ಇಂದು ನಾವು ಪೋರ್ಟ್ ಬ್ಲೇರ್ ನ್ನು "ಶ್ರೀ ವಿಜಯ ಪುರಂ" ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ
ಹಿಂದಿನ ಹೆಸರು ವಸಾಹತುಶಾಹಿ ಪರಂಪರೆಯನ್ನು ಹೊಂದಿದ್ದರೆ, ಶ್ರೀ ವಿಜಯ ಪುರಂ ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯ ಮತ್ತು ಅದರಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ವಿಶಿಷ್ಟ ಪಾತ್ರವನ್ನು ಸಂಕೇತಿಸುತ್ತದೆ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ನಮ್ಮ ಸ್ವಾತಂತ್ರ್ಯ ಹೋರಾಟ ಮತ್ತು ಇತಿಹಾಸದಲ್ಲಿ ಸಾಟಿಯಿಲ್ಲದ ಸ್ಥಾನವನ್ನು ಹೊಂದಿವೆ
ಒಂದು ಕಾಲದಲ್ಲಿ ಚೋಳ ಸಾಮ್ರಾಜ್ಯದ ನೌಕಾ ನೆಲೆಯಾಗಿ ಕಾರ್ಯನಿರ್ವಹಿಸಿದ ದ್ವೀಪ ಪ್ರದೇಶವು ಇಂದು ನಮ್ಮ ಕಾರ್ಯತಂತ್ರ ಮತ್ತು ಅಭಿವೃದ್ಧಿ ಆಕಾಂಕ್ಷೆಗಳಿಗೆ ನಿರ್ಣಾಯಕ ನೆಲೆಯಾಗಲು ಸಜ್ಜಾಗಿದೆ
Posted On:
13 SEP 2024 6:18PM by PIB Bengaluru
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ನ್ನು "ಶ್ರೀ ವಿಜಯ ಪುರಂ" ಎಂದು ಮರುನಾಮಕರಣ ಮಾಡಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ದೃಷ್ಟಿಕೋನದಿಂದ ಪ್ರೇರಿತರಾಗಿ, ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸಲು, ಇಂದು ನಾವು ಪೋರ್ಟ್ ಬ್ಲೇರ್ ನ್ನು "ಶ್ರೀ ವಿಜಯ ಪುರಂ" ಎಂದು ಮರುನಾಮಕರಣ ಮಾಡಲು ನಿರ್ಧರಿಸಿದ್ದೇವೆ ಎಂದು ಗೃಹ ಸಚಿವರು 'ಎಕ್ಸ್' ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಹಿಂದಿನ ಹೆಸರು ವಸಾಹತುಶಾಹಿ ಪರಂಪರೆಯನ್ನು ಹೊಂದಿದ್ದರೆ, ಶ್ರೀ ವಿಜಯ ಪುರಂ ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯ ಮತ್ತು ಅದರಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ವಿಶಿಷ್ಟ ಪಾತ್ರವನ್ನು ಸಂಕೇತಿಸುತ್ತದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದರು. ನಮ್ಮ ಸ್ವಾತಂತ್ರ್ಯ ಹೋರಾಟ ಮತ್ತು ಇತಿಹಾಸದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಸಾಟಿಯಿಲ್ಲದ ಸ್ಥಾನವಿದೆ ಎಂದು ಅವರು ನುಡಿದರು. ಒಂದು ಕಾಲದಲ್ಲಿ ಚೋಳ ಸಾಮ್ರಾಜ್ಯದ ನೌಕಾ ನೆಲೆಯಾಗಿ ಕಾರ್ಯನಿರ್ವಹಿಸಿದ ದ್ವೀಪ ಪ್ರದೇಶವು ಇಂದು ನಮ್ಮ ಕಾರ್ಯತಂತ್ರ ಮತ್ತು ಅಭಿವೃದ್ಧಿ ಆಕಾಂಕ್ಷೆಗಳಿಗೆ ನಿರ್ಣಾಯಕ ನೆಲೆಯಾಗಲು ಸಜ್ಜಾಗಿದೆ ಎಂದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಜೀ ಅವರು ನಮ್ಮ ತಿರಂಗಾವನ್ನು ಮೊದಲ ಬಾರಿಗೆ ಹಾರಿಸಿದ ಸ್ಥಳ ಮತ್ತು ವೀರ್ ಸಾವರ್ಕರ್ ಜೀ ಹಾಗು ಇತರ ಸ್ವಾತಂತ್ರ್ಯ ಹೋರಾಟಗಾರರು ಸ್ವತಂತ್ರ ರಾಷ್ಟ್ರಕ್ಕಾಗಿ ಹೋರಾಡಿದ ಸೆಲ್ಯುಲಾರ್ ಜೈಲು ಕೂಡ ಇದೇ ಸ್ಥಳದಲ್ಲಿದೆ ಎಂದು ಶ್ರೀ ಅಮಿತ್ ಶಾ ರವರು ಹೇಳಿದರು.
*****
(Release ID: 2054823)
Visitor Counter : 60
Read this release in:
English
,
Khasi
,
Urdu
,
Marathi
,
Hindi
,
Assamese
,
Bengali
,
Punjabi
,
Gujarati
,
Tamil
,
Telugu
,
Malayalam