ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಸೆಪ್ಟೆಂಬರ್ 18 ರಿಂದ 20ರವರೆಗೆ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಜಾರ್ಖಂಡ್ ರಾಜ್ಯಗಳಿಗೆ ರಾಷ್ಟ್ರಪತಿಯವರ ಭೇಟಿ

प्रविष्टि तिथि: 17 SEP 2024 8:50PM by PIB Bengaluru

ಭಾರತದ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ ಮುರ್ಮು ಅವರು 2024ರ ಸೆಪ್ಟೆಂಬರ್ 18ರಿಂದ 20ರವರೆಗೆ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಜಾರ್ಖಂಡ್ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.

ಸೆಪ್ಟೆಂಬರ್ 18ರಂದು ರಾಜಸ್ಥಾನದ ಜೈಪುರದ ಮಾಳವೀಯ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಎಂಎನ್ಐಟಿ) 18ನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿಯವರು ಭಾಗವಹಿಸಲಿದ್ದಾರೆ.

ಸೆಪ್ಟೆಂಬರ್ 19ರಂದು ರಾಷ್ಟ್ರಪತಿಯವರು ಸಫಾಯಿ ಮಿತ್ರ ಸಮ್ಮೇಳನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅದೇ ದಿನ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಇಂದೋರ್-ಉಜ್ಜಯಿನಿ ಆರು ಪಥದ ರಸ್ತೆ ಯೋಜನೆಗೆ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ. ಅಂದು ಅವರು ಇಂದೋರ್ ನ ದೇವಿ ಅಹಲ್ಯಾ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ಕೂಡಾ ಭಾಗವಹಿಸಲಿದ್ದಾರೆ.

ಸೆಪ್ಟೆಂಬರ್ 20ರಂದು ಜಾರ್ಖಂಡ್ ನ ರಾಂಚಿಯ ಐಸಿಎಆರ್ - ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೆಕೆಂಡರಿ ಅಗ್ರಿಕಲ್ಚರ್ ನ ಶತಮಾನೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿಯವರು ಭಾಗವಹಿಸಿ ಭಾಷಣ ಮಾಡಲಿದ್ದಾರೆ.

 

*****
 


(रिलीज़ आईडी: 2056057) आगंतुक पटल : 68
इस विज्ञप्ति को इन भाषाओं में पढ़ें: Telugu , English , Urdu , हिन्दी , Manipuri , Tamil , Malayalam