ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಕೇಂದ್ರ ಸಂಪುಟದ ನಿರ್ಧಾರಗಳನ್ನು ಶ್ಲಾಘಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ಪರಿವರ್ತನಾಶೀಲ ಸುಧಾರಣೆಗಳಿಗೆ ಸಾಕ್ಷಿಯಾಗುತ್ತಿದೆ

ಒಂದು ದೇಶ ಒಂದು ಚುನಾವಣೆ ಬಗ್ಗೆ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸುವ ಮೂಲಕ ಭಾರತವು ಪ್ರಮುಖ ಚುನಾವಣಾ ಸುಧಾರಣೆಯತ್ತ ದೊಡ್ಡ ಹೆಜ್ಜೆ ಇಟ್ಟಿದೆ

ಪ್ರಜಾಪ್ರಭುತ್ವವನ್ನು ಸ್ವಚ್ಛ ಮತ್ತು ಆರ್ಥಿಕವಾಗಿ ಪರಿಣಾಮಕಾರಿ ಚುನಾವಣೆಗಳ ಮೂಲಕ ಬಲಪಡಿಸುವ ಮತ್ತು ಹೆಚ್ಚು ಪರಿಣಾಮಕಾರಿಯಾಗಿ ಸಂಪನ್ಮೂಲಗಳನ್ನು ಹಂಚಿಕೆ ಮಾಡುವ ಮೂಲಕ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ಮೋದಿಜಿಯವರ ದೃಢ ಇಚ್ಛಾಶಕ್ತಿಯನ್ನು ಇದು ಪ್ರತಿಬಿಂಬಿಸುತ್ತದೆ

ರೈತರ ಕಲ್ಯಾಣ ಮತ್ತು ಅವರ ಆದಾಯ ಹೆಚ್ಚಿಸುವ ಅವಕಾಶಗಳನ್ನು ಉತ್ತೇಜಿಸುವುದು ಮೋದಿ 3.0 ಸರ್ಕಾರದ ಮೊದಲ ಆದ್ಯತೆಯಾಗಿದೆ

ಕೇಂದ್ರ ಸಂಪುಟವು ₹24,475 ಕೋಟಿ ವೆಚ್ಚದಲ್ಲಿ ರೈತರಿಗಾಗಿ ಪೋಷಕಾಂಶ ಆಧಾರಿತ ಸಬ್ಸಿಡಿ ಯೋಜನೆಗೆ ಅನುಮೋದನೆ ನೀಡಿದೆ

ರೈತರನ್ನು ಅಭ್ಯುದಯ ಮಾಡುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿರುವ ರೈತ ಸ್ನೇಹಿ ಮೋದಿ ಸರ್ಕಾರ ಇಂದು ₹35000 ಕೋಟಿ ವೆಚ್ಚದಲ್ಲಿ ಪ್ರಧಾನಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನಕ್ಕೆ (ಪಿಎಂ-ಆಶಾ) ಅನುಮೋದನೆ ನೀಡಿದೆ

ಬುಡಕಟ್ಟು ಸಮಾಜದ ಸಬಲೀಕರಣ ಮೋದಿಜಿಯವರ ಸಂಕಲ್ಪವಾಗಿದೆ ಮತ್ತು ಈ ದಿಕ್ಕಿನಲ್ಲಿ ಕೆಲಸವೂ ವೇಗವಾಗಿ ನಡೆಯುತ್ತಿದೆ

63,000 ಬುಡಕಟ್ಟು ಹಳ್ಳಿಗಳಲ್ಲಿ ಶೇ. 100 ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಕ್ಕೆ ₹79,156 ಕೋಟಿ ವೆಚ್ಚದ 'ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನ್' ಅನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ

ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್‌ ಟೆಂಡೆಡ್ ರಿಯಾಲಿಟಿ (AVGC-XR) ಗಾಗಿ ನ್ಯಾಷನಲ್ ಸೆಂಟರ್ ಆಫ್ ಎಕ್ಸಲೆನ್ಸ್ (NCoE), ಮಾಧ್ಯಮ ಮತ್ತು ಮನರಂಜನಾ ವಲಯವು ಗಮನಾರ್ಹ ಪ್ರಗತಿಯನ್ನು ಸಾಧಿಸಲು ಸಜ್ಜಾಗಿದೆ

ಜೈವಿಕ ತಂತ್ರಜ್ಞಾನ ಸಂಶೋಧನೆ ಆವಿಷ್ಕಾರ ಮತ್ತು ವಾಣಿಜ್ಯೋದ್ಯಮ ಅಭಿವೃದ್ಧಿ ಯೋಜನೆಯನ್ನು ಅನುಮೋದಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ಕೃತಜ್ಞತೆಗಳು

ಈ ಯೋಜನೆಯು ನಮ್ಮ ಜೈವಿಕ ತಂತ್ರಜ್ಞಾನ ವಲಯಕ್ಕೆ ಹೊಸತನ ಮತ್ತು ಉದ್ಯಮಶೀಲತೆಯ ಮನೋಭಾವವನ್ನು ನೀಡುವ ಮೂಲಕ ಹೊಸ ಶಕ್ತಿಯನ್ನು ತುಂಬುತ್ತದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರು ಇಂದು ಕೇಂದ್ರ ಸಂಪುಟದಲ್ಲಿ ನಾಲ್ಕು ಗೇಮ್-ಚೇಂಜಿಂಗ್ ಯೋಜನೆಗಳನ್ನು ಅನುಮೋದಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಹೊಸ ಮಹತ್ವಾಕಾಂಕ್ಷೆಗಳನ್ನು ಆರಂಭಿಸಿದ್ದಾರೆ

ಚಂದ್ರಯಾನ 4 ಮಿಷನ್ ಮತ್ತು ಶುಕ್ರ ಆರ್ಬಿಟರ್ ಮಿಷನ್ ಚಂದ್ರ ಮತ್ತು ಶುಕ್ರನ ನಮ್ಮ ಜ್ಞಾನದ ಪರಿಧಿಯನ್ನು ವಿಸ್ತರಿಸುತ್ತದೆ



Posted On: 18 SEP 2024 8:34PM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರು ಕೇಂದ್ರ ಸಂಪುಟದ ನಿರ್ಧಾರಗಳನ್ನು ಶ್ಲಾಘಿಸಿದ್ದಾರೆ.

ಈ ಬಗ್ಗೆ ಗೃಹ ಸಚಿವರು  'ಎಕ್ಸ್' ನಲ್ಲಿ ಸರಣಿ ಪೋಸ್ಟ್ ಗಳನ್ನು ಮಾಡಿದ್ದಾರೆ.  ಅದರಲ್ಲಿ"ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ನಾಯಕತ್ವದಲ್ಲಿ, ಭಾರತವು ಪರಿವರ್ತನಾತ್ಮಕ ಸುಧಾರಣೆಗಳನ್ನು ಕಾಣುತ್ತಿದೆ. ಇಂದು, ಈ ದಿಕ್ಕಿನಲ್ಲಿ, ಒಂದು ರಾಷ್ಟ್ರ ಒಂದು ಚುನಾವಣೆ ಕುರಿತ ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಕೇಂದ್ರ ಸಂಪುಟವು ಒಪ್ಪಿಕೊಂಡಿರುವುದರೊಂದಿಗೆ ಭಾರತವು ಗಮನಾರ್ಹ ಚುನಾವಣಾ ಸುಧಾರಣೆಗಳತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಇದು ಸ್ವಚ್ಛ  ಮತ್ತು ಆರ್ಥಿಕವಾಗಿ ಪರಿಣಾಮಕಾರಿ ಚುನಾವಣೆಗಳ ಮೂಲಕ ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ಸಂಪನ್ಮೂಲಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಹಂಚಿಕೆ ಮಾಡುವ ಮೂಲಕ ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ಮೋದಿ ಜಿ  ಮಾಡಿರುವ ದೃಢ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ" ಎಂದು ಹೇಳಿದರು.

ಶ್ರೀ ಅಮಿತ್ ಶಾ ಅವರು, ರೈತರ ಕಲ್ಯಾಣ ಮತ್ತು ಅವರ ಆದಾಯವನ್ನು ಹೆಚ್ಚಿಸುವ ಅವಕಾಶಗಳನ್ನು ಉತ್ತೇಜಿಸುವುದು ಮೋದಿ 3.0 ಸರ್ಕಾದ  ಪ್ರಮುಖ ಆದ್ಯತೆಯಾಗಿದೆ. ಇಂದು ಕೇಂದ್ರ ಸಚಿವ ಸಂಪುಟವು ರೈತರಿಗೆ ₹24,475 ಕೋಟಿ ವೆಚ್ಚದಲ್ಲಿ 'ಪೌಷ್ಠಿಕಾಂಶ ಆಧಾರಿತ ಸಬ್ಸಿಡಿ ಯೋಜನೆ'ಗೆ ಅನುಮೋದನೆ ನೀಡಿದೆ. ಇದು ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳು ಸಬ್ಸಿಡಿ ದರದಲ್ಲಿ ರೈತರಿಗೆ ಲಭ್ಯವಾಗುವಂತೆ ಮಾಡುತ್ತದೆ. ಇದು ಅವರನ್ನು ಆರ್ಥಿಕವಾಗಿ ಸಬಲಗೊಳಿಸುವುದಲ್ಲದೆ ರಸಗೊಬ್ಬರಗಳ ಸಮತೋಲಿತ ಬಳಕೆಯನ್ನು ಉತ್ತೇಜಿಸುತ್ತದೆ. ರೈತರ ಆದಾಯವನ್ನು ಹೆಚ್ಚಿಸಲು ಸದಾ ಸಿದ್ಧರಾಗಿರುವ ಮೋದಿಜಿ ಅವರಿಗೆ ಈ ನಿರ್ಧಾರಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ. 

ರೈತರನ್ನು ಅಭ್ಯುದಯ ಮಾಡುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು, ರೈತ ಸ್ನೇಹಿ ಮೋದಿ ಸರ್ಕಾರ ಇಂದು ₹ 35000 ಕೋಟಿ ವೆಚ್ಚದಲ್ಲಿ 'ಪ್ರಧಾನಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನಕ್ಕೆ (ಪಿಎಂ-ಆಶಾ) ಅನುಮೋದನೆ ನೀಡಿದೆ. ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯನ್ನು ಒದಗಿಸುವದರ ಜೊತೆಗೆ, ಗ್ರಾಹಕರಿಗೆ ಲಭ್ಯವಿರುವ ಅಗತ್ಯ ವಸ್ತುಗಳ ಬೆಲೆ ಏರಿಳಿತಗಳನ್ನು ನಿಯಂತ್ರಿಸಲು ಪಿಎಂ-ಆಶಾ ಸಹಾಯ ಮಾಡುತ್ತದೆ. ಇದು ಬೇಳೆಕಾಳುಗಳು, ಎಣ್ಣೆ ಬೀಜಗಳು ಮತ್ತು ಕೃಷಿ-ತೋಟಗಾರಿಕೆ ಉತ್ಪಾದನೆಯಲ್ಲಿ ರೈತರ ಸ್ವಾವಲಂಬನೆಯನ್ನು ಹೆಚ್ಚಿಸುತ್ತದೆ ಎಂದು ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರು ಹೇಳಿದ್ದಾರೆ. 

ಬುಡಕಟ್ಟು ಸಮಾಜದ ಸಬಲೀಕರಣ ಮೋದಿಜಿಯವರ ಸಂಕಲ್ಪವಾಗಿದೆ ಮತ್ತು ಈ ದಿಕ್ಕಿನಲ್ಲಿ ಕೆಲಸವೂ ವೇಗವಾಗಿ ನಡೆಯುತ್ತಿದೆ. ಇಂದು, 63,000 ಬುಡಕಟ್ಟು ಹಳ್ಳಿಗಳಲ್ಲಿ ಶೇ. 100 ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಕ್ಕೆ ₹79,156 ಕೋಟಿ ವೆಚ್ಚದಲ್ಲಿ 'ಪ್ರಧಾನ ಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನ'ಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಯಿಂದ 5 ಕೋಟಿ ಬುಡಕಟ್ಟು ಜನರು ಪ್ರಯೋಜನ ಪಡೆಯಲಿದ್ದಾರೆ. ಅಲ್ಲದೆ ಅವರ ಗ್ರಾಮಗಳ ಮೂಲಸೌಕರ್ಯ, ಶಿಕ್ಷಣ ಮತ್ತು ಆರೋಗ್ಯ ವಲಯಗಳಲ್ಲಿ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ವೇಗ ಪಡೆಯಲಿವೆ.

ಅನಿಮೇಷನ್, ವಿಷುವಲ್ ಎಫೆಕ್ಟ್ಸ್, ಗೇಮಿಂಗ್, ಕಾಮಿಕ್ಸ್ ಮತ್ತು ಎಕ್ಸ್ ಟೆಂಡೆಡ್ ರಿಯಾಲಿಟಿ (AVGC-XR) ಗಾಗಿ ನ್ಯಾಷನಲ್ ಸೆಂಟರ್ ಆಫ್ ಎಕ್ಸಲೆನ್ಸ್ (NCoE) ನ ಅನುಮೋದನೆಯೊಂದಿಗೆ, ಮಾಧ್ಯಮ ಮತ್ತು ಮನರಂಜನಾ ವಲಯವು ಗಮನಾರ್ಹ ಸಾಧನೆ ಮಾಡಲು ಸಿದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರು ಹೇಳಿದರು. ಈ ಕಾರ್ಯಕ್ರಮವೂ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವ ಸಂದರ್ಭದಲ್ಲಿ ಭಾರತದ ಜಾಗತಿಕ ಸಾಫ್ಟ್ ಪವರ್ ಅನ್ನು ಬಲಪಡಿಸುತ್ತದೆ. ಈ ದೂರದೃಷ್ಟಿಯ ಹೆಜ್ಜೆಗೆ ಮೋದಿಜಿಗೆ ಕೃತಜ್ಞತೆಗಳು.

ಇಂದು ಕೇಂದ್ರ ಸಚಿವ ಸಂಪುಟದಲ್ಲಿ ಜೈವಿಕ ತಂತ್ರಜ್ಞಾನ ಸಂಶೋಧನೆ ಮತ್ತು ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅನುಮೋದನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ಶ್ರೀ ಅಮಿತ್ ಶಾ ಕೃತಜ್ಞತೆ ಸಲ್ಲಿಸಿದರು. ಈ ಯೋಜನೆಯು ನಮ್ಮ ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೆ ಹೊಸತನ ಮತ್ತು ಉದ್ಯಮಶೀಲತೆಯ ಮನೋಭಾವವನ್ನು ನೀಡುವ ಮೂಲಕ ಹೊಸ ಶಕ್ತಿಯನ್ನು ತುಂಬುತ್ತದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರು ಇಂದು ಕೇಂದ್ರ ಸಂಪುಟದಲ್ಲಿ ನಾಲ್ಕು ಗೇಮ್-ಚೇಂಜಿಂಗ್ ಯೋಜನೆಗಳನ್ನು ಅನುಮೋದಿಸುವ ಮೂಲಕ ಭಾರತದಲ್ಲಿ ಬಾಹ್ಯಾಕಾಶ ಕ್ಷೇತ್ರದ ಹೊಸ ಮಹತ್ವಾಕಾಂಕ್ಷೆಗಳಿಗೆ ಚಾಲನೆ ನೀಡಿದರು. ಚಂದ್ರಯಾನ 4 ಮತ್ತು ಶುಕ್ರ ಗ್ರಹದ ಉಪಗ್ರಹ ಮಿಷನ್, ಚಂದ್ರ ಮತ್ತು ಶುಕ್ರ ಗ್ರಹಗಳ ಜ್ಞಾನವನ್ನು ವಿಸ್ತರಿಸುವ ಕೆಲಸ ಮಾಡಲಿವೆ. ಗಗನಯಾನ ಕಾರ್ಯಕ್ರಮದ ವ್ಯಾಪ್ತಿಯನ್ನು ವಿಸ್ತರಿಸಲು ಯೋಜಿಸಲಾದ ಭಾರತೀಯ ಅಂತರಿಕ್ಷ ನಿಲ್ದಾಣ (BAS) ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ನಾಯಕತ್ವವನ್ನು ಬಲಪಡಿಸುತ್ತದೆ. ಮರುಬಳಕೆ ಮಾಡಬಹುದಾದ ಕಡಿಮೆ-ವೆಚ್ಚದ ನೆಕ್ಸ್ಟ್ ಜನರೇಷನ್ ಲಾಂಚ್ ವೆಹಿಕಲ್ (NGLV) ಭಾರತದ ಬಾಹ್ಯಾಕಾಶ ನಿಲ್ದಾಣವನ್ನು ನಿರ್ಮಿಸುವ ಮತ್ತು 2040 ರ ವೇಳೆಗೆ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸುವ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವ ಭಾರತದ ಕನಸನ್ನು ವೇಗಗೊಳಿಸುತ್ತದೆ ಎಂದು ಅವರು ಹೇಳಿದರು.

 

 

 

*****


(Release ID: 2056928) Visitor Counter : 34


Read this release in: English , Marathi