ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಗೆದ್ದ ಪುರುಷರ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ

Posted On: 17 SEP 2024 10:48PM by PIB Bengaluru

ಏಷ್ಯನ್ ಚಾಂಪಿಯನ್ಸ್ ಟ್ರೋಫಿ 2024 ಗೆದ್ದ ಪುರುಷರ ಹಾಕಿ ತಂಡವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಪುರುಷರ ಹಾಕಿ ತಂಡವು ದೇಶಕ್ಕೆ ಹೆಮ್ಮೆ ತಂದಿದೆ ಎಂದು ಆಟಗಾರರ ಕಾರ್ಯಕ್ಷಮತೆ ಮತ್ತು ಬದ್ಧತೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. 

ಇದನ್ನು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು:

"2024 ರ ಏಷ್ಯನ್ ಪುರುಷರ ಹಾಕಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತದ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು!

ಆಟಗಾರರ ಗಮನಾರ್ಹ ಸಾಧನೆ, ಅಚಲವಾದ ಮನೋಭಾವ ಮತ್ತು ಸಮರ್ಪಣೆ ರಾಷ್ಟ್ರವನ್ನು ಹೆಮ್ಮೆ ಪಡುವಂತೆ ಮಾಡಿದೆ.’’ ಎಂದು ಬರೆದುಕೊಂಡಿದ್ದಾರೆ.

 

 

*****

 


(Release ID: 2057789) Visitor Counter : 26