ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ

Posted On: 23 SEP 2024 12:11AM by PIB Bengaluru

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಅನುರ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶ್ರೀಲಂಕಾ ಜೊತೆಗೆ ಬಹುಮುಖಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಿಕಟವಾಗಿ ಕೆಲಸ ಮಾಡುವ ಭರವಸೆಯನ್ನು ಪ್ರಧಾನ ಮಂತ್ರಿಗಳು ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಅವರು:

“ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿರುವ @anuradisanayake ನಿಮಗೆ ಅಭಿನಂದನೆಗಳು. ಭಾರತದ 'ನೇಬರ್ ಹುಡ್ ಫಸ್ಟ್ ಪಾಲಿಸಿ ಅಂಡ್ ವಿಷನ್ ಸಾಗರ' ವಿಷಯದಲ್ಲಿ ಶ್ರೀಲಂಕಾ ವಿಶೇಷ ಸ್ಥಾನವನ್ನು ಹೊಂದಿದೆ. ನಮ್ಮ ದೇಶದ ನಾಗರಿಕರು ಮತ್ತು ಇಡೀ ಪ್ರದೇಶದ ಅನುಕೂಲಕ್ಕಾಗಿ ನಮ್ಮ ಬಹುಮುಖಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ'' ಎಂದು ಬರೆದುಕೊಂಡಿದ್ದಾರೆ.

 

*****

 


(Release ID: 2057861) Visitor Counter : 51