ಗೃಹ ವ್ಯವಹಾರಗಳ ಸಚಿವಾಲಯ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹಾಗೂ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಕೇಂದ್ರ ಗೃಹ ಸಚಿವಾಲಯವು ಸ್ವಚ್ಛ ಭಾರತ ಅಭಿಯಾನಕ್ಕೆ ಬದ್ಧವಾಗಿ ಕಾರ್ಯಪ್ರವರ್ತಿಸುತ್ತಿದೆ
ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ, ಸ್ವಚ್ಛತೆ ಮತ್ತು ಜನರ ನಿರಂತರ ಸಕ್ರಿಯ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವಾಲಯವು ಅನೇಕ ಉಪಕ್ರಮಗಳನ್ನು ಮಾಡುತ್ತಿದೆ
ನಾರ್ತ್ ಬ್ಲಾಕ್ ನಲ್ಲಿರುವ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಕಾರ್ಯದರ್ಶಿ (ಗಡಿ ನಿರ್ವಹಣೆ) ಶ್ರೀ ರಾಜೇಂದ್ರ ಕುಮಾರ್ ಅವರು ಸ್ವಚ್ಛತಾ ಪ್ರತಿಜ್ಞೆ ಬೋಧಿಸಿದರು
ನಾರ್ತ್ ಬ್ಲಾಕ್ ಕ್ಯಾಂಪಸ್ ನಲ್ಲಿ ಸ್ವಚ್ಛತೆಗಾಗಿ ಕೇಂದ್ರ ಗೃಹ ಸಚಿವಾಲಯದ ಹೆಚ್ಚಿನ ಸಂಖ್ಯೆಯ ಅಧಿಕಾರಿಗಳು ಮತ್ತು ನೌಕರರು ಶ್ರಮದಾನ ಮಾಡಿದರು
ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಮತ್ತು ಉದ್ಯೋಗಿಗಳು ಪರಿಸರ ಸಂರಕ್ಷಣೆ ಮತ್ತು ಹಸಿರು ಭವಿಷ್ಯಕ್ಕಾಗಿ ತಮ್ಮ ಬದ್ಧತೆಯನ್ನು ವ್ಯಕ್ತ ಪಡಿಸುತ್ತಾ ನಾರ್ತ್ ಬ್ಲಾಕ್ ಪಾರ್ಕ್ನಲ್ಲಿ 'ಏಕ್ ಪೆಡ್ ಮಾ ಕೆ ನಾಮ್' ಅಭಿಯಾನದ ಅಡಿಯಲ್ಲಿ ಸಸಿಗಳನ್ನು ನೆಟ್ಟರು
Posted On:
25 SEP 2024 12:38PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹಾಗೂ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಕೇಂದ್ರ ಗೃಹ ಸಚಿವಾಲಯವು ಸ್ವಚ್ಛ ಭಾರತ ಅಭಿಯಾನಕ್ಕೆ ಬದ್ಧವಾಗಿದೆ. ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಜನರ ನಿರಂತರ ಸಕ್ರಿಯ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಅನೇಕ ಉಪಕ್ರಮಗಳನ್ನು ಮಾಡುತ್ತಿದೆ. ಈ ಪ್ರಯತ್ನಗಳ ಭಾಗವಾಗಿ, ನಾರ್ತ್ ಬ್ಲಾಕ್ನಲ್ಲಿರುವ ಗೃಹ ಸಚಿವಾಲಯದ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಕಾರ್ಯದರ್ಶಿ (ಗಡಿ ನಿರ್ವಹಣೆ) ಶ್ರೀ ರಾಜೇಂದ್ರ ಕುಮಾರ್ ಅವರು ಸ್ವಚ್ಛತಾ ಶಪಥವನ್ನು ಬೋಧಿಸಿದರು.


ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಮತ್ತು ನೌಕರರು ನಾರ್ತ್ ಬ್ಲಾಕ್ ಆವರಣದಲ್ಲಿ ಸ್ವಚ್ಛತೆಗಾಗಿ ಶ್ರಮದಾನ ಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ಜನರ ಸ್ವಚ್ಛತೆ ಮತ್ತು ಸಕ್ರಿಯ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಗೃಹ ಸಚಿವಾಲಯವು ಮಾಡುತ್ತಿರುವ ಹಲವಾರು ಪ್ರಯತ್ನಗಳಲ್ಲಿ ಈ ಕಾರ್ಯಕ್ರಮವೂ ಒಂದಾಗಿದೆ. ಸ್ವಚ್ಛತಾ ಪ್ರತಿಜ್ಞೆಯು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು, ತ್ಯಾಜ್ಯವನ್ನು ಜವಾಬ್ದಾರಿಯುತವಾಗಿ ವಿಲೇವಾರಿ ಮಾಡುವುದನ್ನು ಉತ್ತೇಜಿಸುವುದು ಮತ್ತು ದೈನಂದಿನ ಜೀವನದಲ್ಲಿ ಸುಸ್ಥಿರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮಹತ್ವವನ್ನು ಸ್ವಚ್ಛತಾ ಪ್ರತಿಜ್ಞೆಯು ಒತ್ತಿಹೇಳುತ್ತದೆ.

ಈ ಸಂದರ್ಭದಲ್ಲಿ, ಕಾರ್ಯದರ್ಶಿ (ಗಡಿ ನಿರ್ವಹಣೆ) ಗೃಹ ಸಚಿವಾಲಯದ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸ್ವಚ್ಛ ಭಾರತ ಅಭಿಯಾನಕ್ಕೆ ಕೊಡುಗೆ ನೀಡುವುದನ್ನು ಮುಂದುವರಿಸಲು ಪ್ರೋತ್ಸಾಹಿಸಿದರು. “ಕೇಂದ್ರ ಗೃಹ ಸಚಿವಾಲಯವು ಸ್ವಚ್ಛ, ಹಸಿರು ಭಾರತದ ದೃಷ್ಟಿಗೆ ಬದ್ಧವಾಗಿದೆ ಮತ್ತು ಸ್ವಚ್ಛತೆ, ಸುಸ್ಥಿರತೆ ಮತ್ತು ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಉತ್ತೇಜಿಸುವ ಉಪಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದನ್ನು ಮುಂದುವರಿಸುತ್ತದೆ” ಎಂದು ಕಾರ್ಯದರ್ಶಿ (ಗಡಿ ನಿರ್ವಹಣೆ) ಶ್ರೀ ರಾಜೇಂದ್ರ ಕುಮಾರ್ ಅವರು ಹೇಳಿದರು.
ಸ್ವಚ್ಛ ಭಾರತ ಅಭಿಯಾನದ ಬಗ್ಗೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸುತ್ತಾ, ಕೇಂದ್ರ ಗೃಹ ಸಚಿವಾಲಯದ ಹೆಚ್ಚಿನ ಸಂಖ್ಯೆಯ ಅಧಿಕಾರಿಗಳು ಮತ್ತು ನೌಕರರು ಸ್ವಚ್ಛತಾ ಚಟುವಟಿಕೆಗಳಲ್ಲಿ ಭಾಗವಹಿಸಿದರು. ಕಚೇರಿ ಆವರಣದಲ್ಲಿನ ಸಾಮಾನ್ಯ ಸ್ಥಳಗಳು, ವಠಾರ, ಸುತ್ತುಮುತ್ತಲ ಪ್ರದೇಶಗಳು ಕಸದಿಂದ ಮುಕ್ತವಾಗಿರುವುದನ್ನು ಖಚಿತಪಡಿಸಿಕೊಂಡರು. ಈ ಸಾಮೂಹಿಕ ಸ್ವಚ್ಛತಾ ಅಭಿಯಾನವು ಪರಿಸರವನ್ನು ಸ್ವಚ್ಛವಾಗಿಡುವಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯನ್ನು ತೋರಿಸುವ ಪ್ರಯತ್ನವಾಗಿ ಕಾರ್ಯನಿರ್ವಹಿಸುತ್ತದೆ.
ಪರಿಸರ ಸಂರಕ್ಷಣೆ ಮತ್ತು ಹಸಿರು ಭವಿಷ್ಯದತ್ತ ತಮ್ಮ ಸಮರ್ಪಣೆಯನ್ನು ತೋರಿಸುತ್ತಾ, ಕೇಂದ್ರ ಗೃಹ ಸಚಿವಾಲಯದ ಹೆಚ್ಚಿನ ಸಂಖ್ಯೆಯ ಅಧಿಕಾರಿಗಳು ಮತ್ತು ಉದ್ಯೋಗಿಗಳು ‘ತಾಯಿಯ ಹೆಸರಲ್ಲಿ ಒಂದು ಮರ (ಏಕ್ ಪೆಡ್ ಮಾ ಕೆ ನಾಮ್)' ಅಭಿಯಾನದ ಅಡಿಯಲ್ಲಿ ನಾರ್ತ್ ಬ್ಲಾಕ್ ನಲ್ಲಿರುವ ಉದ್ಯಾನವನದಲ್ಲಿ ಸಸಿಗಳನ್ನು ನೆಟ್ಟರು.

*****
(Release ID: 2058850)
Visitor Counter : 77
Read this release in:
Telugu
,
English
,
Urdu
,
Marathi
,
Hindi
,
Manipuri
,
Assamese
,
Punjabi
,
Gujarati
,
Odia
,
Tamil