ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಸ್ವಚ್ಛ ಭಾರತ ಅಭಿಯಾನದ 10 ವರ್ಷಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

Posted On: 02 OCT 2024 9:19AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತವನ್ನು ಸ್ವಚ್ಛಗೊಳಿಸುವ ಮತ್ತು ಸುಧಾರಿತ ನೈರ್ಮಲ್ಯ ಸೌಲಭ್ಯಗಳನ್ನು ಖಾತ್ರಿಪಡಿಸುವ ಮಹತ್ವದ ಸಾಮೂಹಿಕ ಪ್ರಯತ್ನವಾದ ಸ್ವಚ್ಛ ಭಾರತ ಅಭಿಯಾನದ 10 ವರ್ಷಗಳನ್ನು ಪೂರ್ಣಗೊಳಿಸಿರುವುದನ್ನು ಶ್ಲಾಘಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

"ಇಂದು, ನಾವು ಸ್ವಚ್ಛ ಭಾರತದ 10 ವರ್ಷಗಳನ್ನು ಆಚರಿಸುತ್ತಿದ್ದೇವೆ, ಇದು ಭಾರತವನ್ನು ಸ್ವಚ್ಛಗೊಳಿಸಲು ಮತ್ತು ಸುಧಾರಿತ ನೈರ್ಮಲ್ಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಮಹತ್ವದ ಸಾಮೂಹಿಕ ಪ್ರಯತ್ನವಾಗಿದೆ. ಈ ಆಂದೋಲನವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ,’’ಎಂದಿದ್ದಾರೆ.

 

 

*****



(Release ID: 2061183) Visitor Counter : 11