ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ; ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಎಕ್ಸ್-ಗ್ರೇಷಿಯಾ ಘೋಷಣೆ

Posted On: 04 OCT 2024 10:52AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡುವಲ್ಲಿ ತೊಡಗಿದೆ ಎಂದು ಅವರು ಭರವಸೆ ನೀಡಿದರು.

Xನ ಪೋಸ್ಟ್ ನಲ್ಲಿ, ಅವರು:

"ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದ ರಸ್ತೆ ಅಪಘಾತ ತುಂಬಾ ನೋವಿನ ವಿಷಯವಾಗಿದೆ. ಪ್ರಾಣ ಕಳೆದುಕೊಂಡವರ ದುಃಖಿತ ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವಲ್ಲಿ ತೊಡಗಿದೆ" ಎಂದು ಬರೆದಿದ್ದಾರೆ.

 

 

ಶ್ರೀ ಮೋದಿಯವರು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ. ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಪ್ರಧಾನ ಮಂತ್ರಿಯವರ ಕಚೇರಿಯು Xನಲ್ಲಿ:

"ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ." ಎಂದು ಪೋಸ್ಟ್ ಮಾಡಿದೆ.

 

 

*****



(Release ID: 2062265) Visitor Counter : 9