ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್‌ನ ಗಾಂಧಿನಗರದಲ್ಲಿ ಹಿರಾಮಣಿ ಆರೋಗ್ಯಧಾಮ್-ಡೇ ಕೇರ್ ಆಸ್ಪತ್ರೆಯನ್ನು ಉದ್ಘಾಟಿಸಿದರು


ಅಂದಿನ ಗುಜರಾತ್ ಮುಖ್ಯಮಂತ್ರಿ ಮತ್ತು ಈಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆರೋಗ್ಯ ಸೌಲಭ್ಯಗಳನ್ನು ಸುಧಾರಿಸಲು ಮತ್ತು ಅವುಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕರ ಆರೋಗ್ಯ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಸ್ವಚ್ಛ ಭಾರತ್ ಮಿಷನ್ ಅನ್ನು ಪ್ರಾರಂಭಿಸಿದರು, ಪ್ರತಿ ಕುಟುಂಬಕ್ಕೂ ಶೌಚಾಲಯ ಮತ್ತು ಕುಡಿಯುವ ನೀರನ್ನು ಒದಗಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡುವ ಮೂಲಕ, ಪ್ರಧಾನಮಂತ್ರಿ ಮೋದಿ ಅವರು ನಿಯಮಿತ ವ್ಯಾಯಾಮವನ್ನು ಸಾರ್ವಜನಿಕರ ದೈನಂದಿನ ದಿನಚರಿಯ ಭಾಗವನ್ನಾಗಿ ಮಾಡಿದರು

ಮೋದಿ ಅವರ ಸರ್ಕಾರ, ಮುಂದಿನ 10 ವರ್ಷಗಳಲ್ಲಿ 75,000 ವೈದ್ಯಕೀಯ ಸೀಟುಗಳನ್ನು ಹೆಚ್ಚಿಸುವ ಯೋಜನೆಯೊಂದಿಗೆ ದೇಶದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ನಿರ್ಮಿಸಲಿದೆ

ದುಬಾರಿ ಔಷಧಿಗಳ ಹೊರೆಯನ್ನು ನಿವಾರಿಸಲು, ಸರ್ಕಾರವು ಜೆನೆರಿಕ್ ಔಷಧಿಗಳನ್ನು ಒದಗಿಸುವ ಕಾರ್ಯವಿಧಾನವನ್ನು ಸ್ಥಾಪಿಸಿತು, ಬಡವರಿಗೆ ಶೇಕಡಾ 10 ರಿಂದ 30 ರಷ್ಟು ಕಡಿಮೆ ಬೆಲೆಗೆ ಔಷಧಿಗಳನ್ನು ಪಡೆಯಲು ಅವಕಾಶ ಮಾಡಿಕೊಟ್ಟಿತು

ಮೋದಿ ಸರ್ಕಾರ 37 ವಿವಿಧ ಯೋಜನೆಗಳನ್ನು ಸಂಯೋಜಿಸುವ ಮೂಲಕ ಲಕ್ಷಾಂತರ ಜನರ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ

ಜನರ ಕಷ್ಟವನ್ನು ನಿವಾರಿಸಲು ಸೂಕ್ಷ್ಮತೆ ಮತ್ತು ದೂರದೃಷ್ಟಿಯೊಂದಿಗೆ ಯೋಜನೆಗಳನ್ನು ರೂಪಿಸುವುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ

ಶ್ರೀ ನರಹರಿ ಅಮೀನ್ ಅವರು ಸಮಾಜ ಸೇವೆ ಮತ್ತು ಸಮಸ್ಯೆಗಳನ್ನು ಪರಿಹರಿಸಲು ನಿರಂತರವಾಗಿ ಕೆಲಸ ಮಾಡಿದ್ದಾರೆ

ಹಿರಾಮಣಿ ಆರೋಗ್ಯಧಾಮದಲ್ಲಿ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆಗಳು, ಡಯಾಲಿಸಿಸ್ ಮತ್ತು ಫಿಸಿಯೋಥೆರಪಿಯನ್ನು ಸಾರ್ವಜನಿಕರಿಗೆ ಕೈಗೆಟುಕುವಂತೆ ಮಾಡಲಾಗಿದೆ

Posted On: 04 OCT 2024 4:19PM by PIB Bengaluru

ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್‌ ನ ಗಾಂಧಿನಗರದಲ್ಲಿ ಹಿರಾಮಣಿ ಆರೋಗ್ಯಧಾಮ್ ಡೇ-ಕೇರ್ ಆಸ್ಪತ್ರೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ತಮ್ಮ ಭಾಷಣದಲ್ಲಿ, ಶ್ರೀ ಅಮಿತ್ ಶಾ ಅವರು ಗುಜರಾತ್ನ ಅಂದಿನ ಮುಖ್ಯಮಂತ್ರಿ ಮತ್ತು ಪ್ರಸ್ತುತ ದೇಶದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸಲು ಮತ್ತು ಅವುಗಳನ್ನು ಸಾರ್ವಜನಿಕರಿಗೆ ತಲುಪಿಸಲು ಹಲವಾರು ಪ್ರಯತ್ನಗಳನ್ನು ಮಾಡಿದ್ದಾರೆ. ಶ್ರೀ ನರಹರಿ ಅಮೀನ್ ಅವರು ಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು  ಸಮಸ್ಯೆಗಳನ್ನು ಪರಿಹರಿಸಲು ಅವಿರತವಾಗಿ ಶ್ರಮಿಸಿದ್ದಾರೆ ಎಂದು ಕೇಂದ್ರ ಸಚಿವರು ಹೇಳಿದರು . ನರಹರಿ ಜಿ ಅವರು ರಾಜ್ಯದ ಕ್ರಿಕೆಟ್ ಅಸೋಸಿಯೇಷನ್ ಮೂಲಕ ಗುಜರಾತ್ ನಾದ್ಯಂತ ಕ್ರೀಡಾಪಟುಗಳಿಗೆ ಮೂಲಸೌಕರ್ಯಗಳನ್ನು ಸ್ಥಾಪಿಸಿದ್ದಾರೆ ಎಂದು ಶ್ರೀ ಶಾ ಹೈಲೈಟ್ ಮಾಡಿದರು. ಇದಲ್ಲದೆ, ಶಾಲೆಗಳ ಮೂಲಕ, ಅವರು ಸುಮಾರು 4,000 ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಮತ್ತು ಅವರ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡಲು ಗಮನಾರ್ಹ ಪ್ರಯತ್ನಗಳನ್ನು ಮಾಡಿದ್ದಾರೆ. ವೃದ್ಧಾಶ್ರಮಗಳು ಮತ್ತು ಅನ್ನಪೂರ್ಣ ಟ್ರಸ್ಟ್ ಅನ್ನು ಸ್ಥಾಪಿಸಿದ ನಂತರ ನರಹರಿ ಜಿ ಅವರು ಈಗ ತಮ್ಮ ಹೆತ್ತವರ ನೆನಪಿಗಾಗಿ ಈ ಹಿರಾಮಣಿ ಆರೋಗ್ಯಧಾಮವನ್ನು ನಿರ್ಮಿಸಿದ್ದಾರೆ, ಇದು ನಿಜವಾಗಿಯೂ ಶ್ಲಾಘನೀಯ ಎಂದು ಶ್ರೀ ಷಾ ಹೇಳಿದರು.

ಆಧುನಿಕ ಜೀವನಶೈಲಿ, ನಿರಂತರ ಓಡಾಟ, ಮಾಲಿನ್ಯ ಮತ್ತಿತರ ಅಂಶಗಳು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತಿದ್ದು, ವಿವಿಧ ಕಾಯಿಲೆಗಳಿಗೆ ಕಾರಣವಾಗುತ್ತಿದ್ದು,  ಆ ರೋಗಗಳಿಂದ ಮುಕ್ತಿ ಹೊಂದಲು ದೀರ್ಘಾವಧಿ ಚಿಕಿತ್ಸೆಯ ಅಗತ್ಯವಿದೆ ಎಂದು ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಹೇಳಿದ್ದಾರೆ.  ಈ ರೀತಿಯ ಕಾಯಿಲೆಗೆ ವಿವಿಧ ರೀತಿಯ ಚಿಕಿತ್ಸೆಗಳು, ಡಯಾಲಿಸಿಸ್, ಫಿಸಿಯೋಥೆರಪಿ ಮತ್ತಿತರ ಚಿಕಿತ್ಸೆಗಳನ್ನು ಮಾಡಬೇಕಾಗಿದೆ ಎಂದು ಹೇಳಿದರು. ಸಾಮಾನ್ಯವಾಗಿ ಇಂತಹ ಚಿಕಿತ್ಸೆಗಳಿಗೆ ಅಪಾರ ಹಣ ವ್ಯಯಿಸಬೇಕಾಗಿದ್ದು, ಇದಲ್ಲದೇ ಬಡವರು,  ಮಧ್ಯಮ ವರ್ಗದವರು ಹಾಗೂ  ಗ್ರಾಮೀಣ ಪ್ರದೇಶದಲ್ಲಿ ವಾಸಿಸುವವರಿಗೆ ಇಂತಹ ಚಿಕಿತ್ಸೆಗಳು ಲಭ್ಯವಾಗುವುದಿಲ್ಲ ಎಂದು ಹೇಳಿದರು.   ಈ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು, ಶ್ರೀ ನರಹರಿ ಜೀ ಅವರು ಹಿರಾಮಣಿ ಆರೋಗ್ಯಧಾಮವನ್ನು ನಿರ್ಮಿಸಿದ್ದಾರೆ, ಅದನ್ನು ಇಂದು ಉದ್ಘಾಟಿಸಲಾಯಿತು. ಜನರ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ನರಹರಿ ಜಿ ಸಮಗ್ರ ವಿಧಾನವನ್ನು ತೆಗೆದುಕೊಂಡಿದ್ದಾರೆ ಎಂದು ಶ್ರೀ ಶಾ ಒತ್ತಿ ಹೇಳಿದರು.

ಸಾರ್ವಜನಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಅಭಿಯಾನವನ್ನು ಪ್ರಾರಂಭಿಸಿದರು. ಇದು ಅನಾರೋಗ್ಯಕರ ಪರಿಸ್ಥಿತಿಗಳಿಂದ ಉಂಟಾಗುವ ಅನೇಕ ಕಾಯಿಲೆಗಳನ್ನು ತಪ್ಪಿಸಲು ಜನರಿಗೆ ಸಹಾಯ ಮಾಡಿದೆ ಎಂದು ಶ್ರೀ ಅಮಿತ್ ಶಾ ಹೇಳಿದರು. ಇದರ ನಂತರ, ಸರ್ಕಾರವು ಪ್ರತಿ ಮನೆಗೂ  ಶುದ್ಧ ಕುಡಿಯುವ ನೀರು ಒದಗಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿತು. ಇದು ನೀರಿನಿಂದ ಹರಡುವ ರೋಗಗಳನ್ನು ತಡೆಯಲು ಸಹಾಯ ಮಾಡಿತು ಎಂದು ಅವರು ಹೇಳಿದರು. ಪ್ರತಿ ಮನೆಯಲ್ಲೂ ಶೌಚಾಲಯಗಳನ್ನು ನಿರ್ಮಿಸಲಾಯಿತು ಮತ್ತು ನಿಯಮಿತ ವ್ಯಾಯಾಮವನ್ನು ಜನರ ದಿನಚರಿಯ ಭಾಗವಾಗಿಸಲು ಅಂತಾರಾಷ್ಟ್ರೀಯ ಯೋಗ ದಿನವನ್ನು ಪರಿಚಯಿಸಲಾಯಿತು. ಪ್ರಧಾನ ಮಂತ್ರಿ ಆಯುಷ್ಮಾನ್ ಕಾರ್ಡ್ ಮೂಲಕ, ಪ್ರಧಾನಮಂತ್ರಿ ಶ್ರೀ ಮೋದಿ ಅವರು ಲಕ್ಷಾಂತರ ಜನರಿಗೆ ಐದು ಲಕ್ಷ ರೂಪಾಯಿಗಳ ಸಮಗ್ರ ಆರೋಗ್ಯ ರಕ್ಷಣೆಯನ್ನು ಒದಗಿಸಿದ್ದು, ದುಬಾರಿ ಚಿಕಿತ್ಸೆಗಳ ಹೊರೆಯಿಂದ ಅವರನ್ನು ಮುಕ್ತಗೊಳಿಸಿದ್ದಾರೆ ಎಂದು ಶ್ರೀ ಶಾ ಹೇಳಿದರು.

ಸರ್ಕಾರವು ಯೋಜನೆಯನ್ನು ರೂಪಿಸಬಹುದಾದರೂ, ಸಾಕಷ್ಟು ಮೂಲಸೌಕರ್ಯಗಳಿಲ್ಲದೆ ಸಮಗ್ರ ಆರೋಗ್ಯ ರಕ್ಷಣೆ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವರು ಹೇಳಿದರು. ಇದನ್ನು ಪರಿಹರಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ದೇಶಾದ್ಯಂತ ಆರೋಗ್ಯ ಮೂಲಸೌಕರ್ಯಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ ಎಂದು ಅವರು ಹೇಳಿದರು. ಮುಂದಿನ 10 ವರ್ಷಗಳಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 75,000 ಹೆಚ್ಚಿಸುವ ಗುರಿಯನ್ನು ಮೋದಿ ಸರ್ಕಾರ ಹೊಂದಿದೆ ಎಂದು ಶ್ರೀ ಶಾ ಹೇಳಿದರು. ದುಬಾರಿ ಔಷಧಗಳ ಹೊರೆಯಿಂದ ಜನರನ್ನು ಪಾರು ಮಾಡುವ ಉದ್ದೇಶದಿಂದ ಸರ್ಕಾರ ಜೆನೆರಿಕ್ ಔಷಧಗಳನ್ನು ನೀಡುವ ವ್ಯವಸ್ಥೆ ರೂಪಿಸಿದೆ ಎಂದು ಸಚಿವರು ಹೇಳಿದರು.   ಇದು ಮಾರುಕಟ್ಟೆಗೆ ಹೋಲಿಸಿದರೆ ಶೇಕಡಾ 10 ರಿಂದ 30 ರಷ್ಟು ಕಡಿಮೆ ಬೆಲೆಗೆ ಔಷಧಿಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಅವರು ಹೇಳಿದರು.

ಸುಮಾರು 37  ರೀತಿಯ ಯೋಜನೆಗಳನ್ನು ಒಟ್ಟುಗೂಡಿಸಿ ಇಡೀ ಆರೋಗ್ಯ ವ್ಯವಸ್ಥೆಗೆ ಹೊಸ ರೂಪ ನೀಡಲಾಗಿದೆ ಎಂದು ಶ್ರೀ ಅಮಿತ್ ಶಾ ತಿಳಿಸಿದರು. ಈ 37  ಕಾರ್ಯಕ್ರಮಗಳ ಸಂಯೋಜನೆಯು ದೇಶದ  140  ಕೋಟಿ ಜನರ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ತಡೆಗಟ್ಟುವ ಪ್ರಯತ್ನವಾಗಿದೆ ಎಂದು ಅವರು ಹೇಳಿದರು. ಜನರ ಸಂಕಷ್ಟಗಳನ್ನು ನಿವಾರಿಸುವ ಸಂವೇದನಾಶೀಲ ಮತ್ತು ದೂರದೃಷ್ಟಿ ಆಧಾರಿತ ಯೋಜನೆಗೆ ಇದು ಅತ್ಯುತ್ತಮ ಇದೊಂದು ಅತ್ಯುತ್ತಮ ಉದಾಹರಣೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದರು . 

ಡಯಾಲಿಸಿಸ್ ಮತ್ತು ಫಿಸಿಯೋಥೆರಪಿಯಂತಹ ದೀರ್ಘಕಾಲದ ಕಾಯಿಲೆಗಳಿಗೆ ದೈನಂದಿನ ಚಿಕಿತ್ಸೆಗಳ ಸೌಲಭ್ಯಗಳು ಹತ್ತಿರದಲ್ಲಿ ಮತ್ತು ಕೈಗೆಟುಕುವ ದರದಲ್ಲಿ ಲಭ್ಯವಿದ್ದರೆ, ಬಡ ಜನರು ಅದರಿಂದ ಪ್ರಯೋಜನ ಪಡೆಯಬಹುದು ಎಂದು ಕೇಂದ್ರ ಗೃಹ ಸಚಿವರು ಹೇಳಿದರು. ಹಿರಾಮಣಿ ಆರೋಗ್ಯಧಾಮ್ನಲ್ಲಿ, ವಿವಿಧ ಕಾಯಿಲೆಗಳಿಗೆ ಚಿಕಿತ್ಸೆಗಳು, ಡಯಾಲಿಸಿಸ್ ಮತ್ತು ಫಿಸಿಯೋಥೆರಪಿಗಳನ್ನು ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ ಎಂದು ಅವರು ಹೇಳಿದರು.

 

*****


(Release ID: 2062312) Visitor Counter : 27