ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು
Posted On:
04 OCT 2024 9:28AM by PIB Bengaluru
ಸ್ವಾತಂತ್ರ್ಯ ಹೋರಾಟಗಾರರಾದ ಶ್ಯಾಮ್‌ಜಿ ಕೃಷ್ಣ ವರ್ಮಾ 95ನೇ ಜನ್ಮಜಯಂತಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಸ್ಮರಿಸಿದ್ದಾರೆ.
ರಾಷ್ಟ್ರಕ್ಕಾಗಿ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಸಮರ್ಪಣೆ ಮತ್ತು ಸೇವೆ ಸ್ಪೂರ್ತಿದಾಯಕ ಎಂದು ಮೋದಿ ಶ್ಲಾಘಿಸಿದ್ದಾರೆ.
ಇದನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಧಾನಮಂತ್ರಿಗಳು:
"ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತ ಮಾತೆಯ ಕೆಚ್ಚೆದೆಯ ಪುತ್ರ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರಿಗೆ ಅವರ ಜನ್ಮಜಯಂತಿಯಂದು ನೂರು ನಮನಗಳು. ಅವರು ತಮ್ಮ ಕ್ರಾಂತಿಕಾರಿ ಹೆಜ್ಜೆಗಳ ಮೂಲಕ ದೇಶದ ಸ್ವಾತಂತ್ರ್ಯದ ಸಂಕಲ್ಪದಲ್ಲಿ ಅದ್ಭುತ ಶಕ್ತಿಯನ್ನು ತುಂಬಿದರು. ರಾಷ್ಟ್ರದೆಡೆಗಿನ ಅವರ ಸಮರ್ಪಣೆ ಮತ್ತು ಸೇವಾ ಮನೋಭಾವವು ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ'' ಎಂದು ಬರೆದಿದ್ದಾರೆ.
*****
(Release ID: 2062333)
Read this release in:
Telugu
,
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Malayalam