ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ  

Posted On: 08 OCT 2024 2:09PM by PIB Bengaluru

ಶ್ರೀ ರಾಮ್ ವಿಲಾಸ್ ಪಾಸ್ವಾನ್ ಜಿ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ರಾಮ್ ವಿಲಾಸ್ ಜಿ ಅವರು ಅತ್ಯುತ್ತಮ ನಾಯಕರಾಗಿದ್ದರು, ಬಡವರ ಸಬಲೀಕರಣಕ್ಕಾಗಿ ಸಂಪೂರ್ಣವಾಗಿ ಬದ್ಧರಾಗಿದ್ದರು ಮತ್ತು ಬಲಿಷ್ಠ ಹಾಗೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಸಮರ್ಪಿತರಾಗಿದ್ದರು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

“ನನ್ನ ಆತ್ಮೀಯ ಗೆಳೆಯ ಮತ್ತು ಭಾರತದ ಅತ್ಯುನ್ನತ ನಾಯಕರಲ್ಲಿ ಒಬ್ಬರಾದ ಶ್ರೀ ರಾಮ್ ವಿಲಾಸ್ ಪಾಸ್ವಾನ್ ಜಿ ಅವರ ಪುಣ್ಯ ತಿಥಿಯಂದು ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರು ಅತ್ಯುತ್ತಮ ನಾಯಕರಾಗಿದ್ದರು, ಬಡವರನ್ನು ಸಬಲೀಕರಣಗೊಳಿಸಲು ಸಂಪೂರ್ಣವಾಗಿ ಮೀಸಲಿಟ್ಟಿದ್ದರು ಮತ್ತು ಬಲಿಷ್ಠ ಹಾಗೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ತಮ್ಮನ್ನು ಸಮರ್ಪಿಸಿದ್ದರು. ಹಲವು ವರ್ಷಗಳಿಂದ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಅವಕಾಶ ದೊರಕಿದ ನಾನು ಅದೃಷ್ಟಶಾಲಿಯಾಗಿದ್ದೇನೆ. ಈಗ ಹಲವಾರು ವಿಷಯಗಳ ಬಗ್ಗೆ ಅವರ  ಒಳನೋಟಗಳನ್ನು ನಾನು ಬಹಳವಾಗಿ ಕಳೆದುಕೊಂಡಿದ್ದೇನೆ. ”

 

 

*****


(Release ID: 2063163) Visitor Counter : 42