ಗೃಹ ವ್ಯವಹಾರಗಳ ಸಚಿವಾಲಯ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಾಳೆ ನವದೆಹಲಿಯಲ್ಲಿ ಮುಖ್ಯ ಅತಿಥಿಯಾಗಿ ಪಿ ಎಚ್ ಡಿ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಳಿಯ 119ನೇ ವಾರ್ಷಿಕ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ
ವಾರ್ಷಿಕ ಅಧಿವೇಶನದ ವಿಷಯ 'ವಿಕಸಿತ ಭಾರತ @ 2047: ಪ್ರಗತಿಯ ಉತ್ತುಂಗದೆಡೆಗೆ ಸಾಗುವುದು'
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸಂಕಲ್ಪದ ಕಡೆಗೆ ಇಡೀ ದೇಶವು ಸಮರ್ಪಣೆ ಮತ್ತು ಶ್ರದ್ಧೆಯಿಂದ ವೇಗವಾಗಿ ಸಾಗುತ್ತಿದೆ
ಪ್ರಧಾನಮಂತ್ರಿ ಮೋದಿಯವರ ನಾಯಕತ್ವದಲ್ಲಿ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ
Posted On:
09 OCT 2024 4:54PM by PIB Bengaluru
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಗುರುವಾರ, 10 ಅಕ್ಟೋಬರ್ 2024 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಪಿ ಎಚ್ ಡಿ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಳಿಯ 119ನೇ ವಾರ್ಷಿಕ ಅಧಿವೇಶನವನ್ನು ಮುಖ್ಯ ಅತಿಥಿಯಾಗಿ ಉದ್ದೇಶಿಸಿ ಮಾತನಾಡಲಿದ್ದಾರೆ. ವಾರ್ಷಿಕ ಅಧಿವೇಶನದ ವಿಷಯ 'ವಿಕಸಿತ ಭಾರತ @ 2047: ಪ್ರಗತಿಯ ಉತ್ತುಂಗದೆಡೆಗೆ ಸಾಗುವುದು' ಆಗಿದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಸಂಕಲ್ಪ ಮಾಡಿದ್ದಾರೆ ಮತ್ತು ಇಡೀ ದೇಶವು ಸಮರ್ಪಣಾ ಮತ್ತು ಶ್ರದ್ಧೆಯಿಂದ ಆ ದಿಕ್ಕಿನಲ್ಲಿ ವೇಗವಾಗಿ ಸಾಗುತ್ತಿದೆ.
ಭಾರತವು ವಿಶ್ವದ ಅಗ್ರ 5 ಆರ್ಥಿಕತೆಗಳಲ್ಲಿ ಸೇರಿಕೊಂಡಿದೆ ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯತ್ತ ಸಾಗುತ್ತಿದೆ.
ಉದ್ಯಮದ ಸುಮಾರು 1500 ಉದ್ಯಮಿಗಳು, ಚಾರ್ಟರ್ಡ್ ಅಕೌಂಟೆಂಟ್ ಗಳು, ಬ್ಯಾಂಕರ್ ಗಳು, ವಕೀಲರು ಮುಂತಾದವರು 119ನೇ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ.
*****
(Release ID: 2063591)
Visitor Counter : 34