ಪ್ರಕಟಣಾ ದಿನಾಂಕ:
12 OCT 2024 5:09PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತ್ ನ ಮೆಹ್ಸಾನಾ ಜಿಲ್ಲೆಯಲ್ಲಿ ಗೋಡೆ ಕುಸಿದು ಸಂಭವಿಸಿದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಾದವರ ಕುಟುಂಬಕ್ಕೆ 2 ಲಕ್ಷ ರೂ.ಗಳ ಆರ್ಥಿಕ ನೆರವು ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಆರ್ಥಿಕ ನೆರವನ್ನು ಶ್ರೀ ಮೋದಿಯವರು ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ;
"ಗುಜರಾತ್ ನ ಮೆಹ್ಸಾನಾದಲ್ಲಿ ಗೋಡೆ ಕುಸಿತದಿಂದಾಗಿ ಸಂಭವಿಸಿದ ಅಪಘಾತದಿಂದ ನನಗೆ ತುಂಬಾ ದುಃಖವಾಗಿದೆ. ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಲ್ಲಿ ತೊಡಗಿದೆ: @narendramodi" ಪೋಸ್ಟ್ ಮಾಡಿದ್ದಾರೆ.
"ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಾದವರ ಕುಟುಂಬಕ್ಕೆ 2 ಲಕ್ಷ ರೂ.ಗಳ ಆರ್ಥಿಕ ನೆರವು ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಆರ್ಥಿಕ ನೆರವನ್ನು ನೀಡಲಾಗುವುದು" ಎಂದು ತಿಳಿಸಿದ್ದಾರೆ.
*****