ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಂಗಳವಾರ, 15 ಅಕ್ಟೋಬರ್ 2024 ರಂದು ನವದೆಹಲಿಯಲ್ಲಿ ಐಪಿಎಸ್ ಪ್ರೊಬೇಷನರ್ಸ್ ಜೊತೆ ಸಂವಾದ


ಪ್ರೊಬೆಷನರಿ ಅಧಿಕಾರಿಗಳು ತಮ್ಮ ತರಬೇತಿ ಅನುಭವಗಳನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರೊಂದಿಗೆ ಹಂಚಿಕೊಳ್ಳಲಿದ್ದಾರೆ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂಕಲ್ಪವನ್ನು ಈಡೇರಿಸುವಲ್ಲಿ ಯುವ ಪೊಲೀಸ್ ಅಧಿಕಾರಿಗಳ ಪಾತ್ರ ಪ್ರಮುಖ

ದೇಶದ ಆಂತರಿಕ ಭದ್ರತೆಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸಲು ಪ್ರೊಬೆಷನರಿ ಅಧಿಕಾರಿಗಳು ಗೃಹ ಸಚಿವರಿಂದ ಮಾರ್ಗದರ್ಶನ

Posted On: 14 OCT 2024 4:09PM by PIB Bengaluru

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಂಗಳವಾರ, 15 ಅಕ್ಟೋಬರ್ 2024 ರಂದು ನವದೆಹಲಿಯಲ್ಲಿ 76 RR (2023 ಬ್ಯಾಚ್) ನ ಭಾರತೀಯ ಪೊಲೀಸ್ ಸೇವೆ (IPS) ಪ್ರೊಬೆಷನರ್‌ಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಸಂವಾದದ ಸಮಯದಲ್ಲಿ, ಪ್ರೊಬೆಷನರಿ ಅಧಿಕಾರಿಗಳು ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರೊಂದಿಗೆ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. 

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಂಕಲ್ಪವನ್ನು ಈಡೇರಿಸುವಲ್ಲಿ ಯುವ ಪೊಲೀಸ್ ಅಧಿಕಾರಿಗಳು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಸಭೆಯಲ್ಲಿ, ದೇಶದ ಆಂತರಿಕ ಭದ್ರತೆಗೆ ಸಂಬಂಧಿಸಿದ ಸವಾಲುಗಳನ್ನು ಎದುರಿಸಲು ಗೃಹ ಸಚಿವರಿಂದ ಪ್ರೊಬೆಷನರಿ ಅಧಿಕಾರಿಗಳು ಮಾರ್ಗದರ್ಶನ ಪಡೆಯಲಿದ್ದಾರೆ. 

ಭಾರತೀಯ ಪೊಲೀಸ್ ಸೇವೆ 2023 ಬ್ಯಾಚ್‌ನಲ್ಲಿ, 54 ಮಹಿಳಾ ಅಧಿಕಾರಿಗಳು ಸೇರಿದಂತೆ ಒಟ್ಟು 188 ಅಧಿಕಾರಿ ಪ್ರಶಿಕ್ಷಣಾರ್ಥಿಗಳು ಬೇಸಿಕ್ ಕೋರ್ಸ್ ತರಬೇತಿ ಹಂತ-1 ಅನ್ನು ಪೂರ್ಣಗೊಳಿಸಿದ್ದಾರೆ. ದೆಹಲಿಯಲ್ಲಿ ವಿವಿಧ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಕೇಂದ್ರ ಪೊಲೀಸ್ ಸಂಸ್ಥೆಗಳೊಂದಿಗೆ (CPOs) ಎರಡು ವಾರಗಳ ತರಬೇತಿಯ ನಂತರ, IPS ತರಬೇತಿ ಅಧಿಕಾರಿಗಳು ತಮ್ಮ ತಮ್ಮ ಕೇಡರ್‌ಗಳಲ್ಲಿ 29 ವಾರಗಳ ಜಿಲ್ಲಾ ಪ್ರಾಯೋಗಿಕ ತರಬೇತಿಯನ್ನು ಪಡೆಯಲಿದ್ದಾರೆ.

 

*****
 


(Release ID: 2064685) Visitor Counter : 32