ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಮಣಿಪುರದ ಕುಕಿ-ಝೋ-ಹ್ಮಾರ್, ಮೈಟೀ ಮತ್ತು ನಾಗಾ ಸಮುದಾಯಗಳನ್ನು ಪ್ರತಿನಿಧಿಸುವ ಮಣಿಪುರ ವಿಧಾನಸಭೆಯ ಚುನಾಯಿತ ಸದಸ್ಯರ ತಂಡವು, ರಾಜ್ಯದ ಪ್ರಸ್ತುತ ಸನ್ನಿವೇಶದ ಕುರಿತು ಚರ್ಚಿಸಲು ಇಂದು ನವದೆಹಲಿಯಲ್ಲಿ ಸಭೆ ನಡೆಸಿದರು

Posted On: 15 OCT 2024 6:12PM by PIB Bengaluru

ಕುಕಿ-ಜೋ-ಹ್ಮಾರ್, ಮೈತೇಯಿ ಮತ್ತು ನಾಗಾ ಸಮುದಾಯಗಳನ್ನು ಪ್ರತಿನಿಧಿಸುತ್ತಿರುವ ಮಣಿಪುರ ವಿಧಾನಸಭೆಯ ಚುನಾಯಿತ ಸದಸ್ಯರ ತಂಡವು ರಾಜ್ಯದ ಪ್ರಸ್ತುತ ಸನ್ನಿವೇಶದ ಕುರಿತು ಚರ್ಚಿಸಲು ಇಂದು ನವದೆಹಲಿಯಲ್ಲಿ ಸಭೆ ನಡೆಸಿದರು. ಅಮಾಯಕ ನಾಗರಿಕರ ಅಮೂಲ್ಯ ಜೀವಗಳು ಇನ್ನು ಮುಂದೆ ಬಲಿಯಾಗದಂತೆ, ಹಿಂಸಾಚಾರದ ಹಾದಿಯನ್ನು ದೂರವಿಡುವಂತೆ, ರಾಜ್ಯದ ಎಲ್ಲ ಸಮುದಾಯಗಳಿಗೆ ಸೇರಿದ ಜನರಲ್ಲಿ ಮನವಿ ಮಾಡಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಯಿತು.

 

*****


(Release ID: 2065181) Visitor Counter : 50