ಹಣಕಾಸು ಸಚಿವಾಲಯ
azadi ka amrit mahotsav

ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3ರಷ್ಟು ಹೆಚ್ಚುವರಿ ತುಟ್ಟಿಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರಕ್ಕೆ ಸಂಪುಟದ ಅನುಮೋದನೆ

Posted On: 16 OCT 2024 3:21PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ 3 ರಷ್ಟು ಹೆಚ್ಚುವರಿ ಕಂತಿನ ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ವನ್ನು ಅನುಮೋದಿಸಿದೆ. ಬೆಲೆ ಏರಿಕೆಯನ್ನು ಸರಿದೂಗಿಸಲು ದಿನಾಂಕ 01.07.2024 ರಿಂದ ಅನ್ವಯವಾಗುವಂತೆ ಅಸ್ತಿತ್ವದಲ್ಲಿರುವ ಮೂಲ ವೇತನ/ಪಿಂಚಣಿಯ ಶೇಕಡ 50ಕ್ಕಿಂತ ಹೆಚ್ಚಿನ ಪ್ರಮಾಣಕ್ಕೆ ಅನುಮೋದನೆ ನೀಡಿದೆ. 

ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ. ಡಿಎ ಮತ್ತು ಡಿಆರ್ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲಿನ ಸಂಯೋಜಿತ ವಾರ್ಷಿಕ ಹೊರೆಯು ರೂ.9,448.35 ಕೋಟಿಗಳಾಗಿರುತ್ತದೆ.

ಈ ನಿರ್ಧಾರದಿಂದಾಗಿ ಸುಮಾರು 49.18 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು 64.89 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

 

*****
 



(Release ID: 2065415) Visitor Counter : 40