ಪ್ರಧಾನ ಮಂತ್ರಿಯವರ ಕಛೇರಿ
ರಾಜಸ್ಥಾನದ ಧೋಲ್ ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರಿಂದ ಸಂತಾಪ ಸೂಚನೆ; ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಎಕ್ಸ್-ಗ್ರೇಷಿಯಾ ಘೋಷಣೆ
Posted On:
20 OCT 2024 1:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ರಾಜಸ್ಥಾನದ ಧೋಲ್ ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡುವಲ್ಲಿ ತೊಡಗಿದೆ ಎಂದು ಅವರು ಭರವಸೆ ನೀಡಿದರು.
Xನ ಪೋಸ್ಟ್ ನಲ್ಲಿ, ಅವರು:
"ರಾಜಸ್ಥಾನದ ಧೋಲ್ ಪುರದಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕವಾಗಿದೆ. ಮುಗ್ಧ ಮಕ್ಕಳು ಸೇರಿದಂತೆ ಪ್ರಾಣ ಕಳೆದುಕೊಂಡವರ ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯದಲ್ಲಿ ತೊಡಗಿದೆ: ಪ್ರಧಾನಿ" ಎಂದು ಬರೆದಿದ್ದಾರೆ.
ಶ್ರೀ ಮೋದಿಯವರು ರಾಜಸ್ಥಾನದ ಧೋಲ್ ಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.
ಪ್ರಧಾನ ಮಂತ್ರಿಯವರ ಕಚೇರಿಯು Xನಲ್ಲಿ:
"ರಾಜಸ್ಥಾನದ ಧೋಲ್ ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ." ಎಂದು ಪೋಸ್ಟ್ ಮಾಡಿದೆ.
*****
(Release ID: 2066611)
Read this release in:
Odia
,
English
,
Urdu
,
Hindi
,
Marathi
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam