ಉಪರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಅಕ್ಟೋಬರ್ 25-26, 2024 ರಂದು ಉಪರಾಷ್ಟ್ರಪತಿಯವರು ಕರ್ನಾಟಕಕ್ಕೆ ಎರಡು ದಿನಗಳ ಭೇಟಿ


ಉಪರಾಷ್ಟ್ರಪತಿಯವರು ಕರ್ನಾಟಕದ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ

ಬೆಂಗಳೂರಿನಲ್ಲಿ ನಡೆಯಲಿರುವ "ನಮ ಶಿವಾಯ" ಪಾರಾಯಣದಲ್ಲಿ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಮುಖ್ಯ ಅತಿಥಿಗಳಾಗಿ ಭಾಗಿ

Posted On: 24 OCT 2024 4:43PM by PIB Bengaluru

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಅಕ್ಟೋಬರ್ 25-26, 2024 ರಂದು ಕರ್ನಾಟಕಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದಾರೆ.

ತಮ್ಮ ಭೇಟಿಯ ಮೊದಲ ದಿನದಂದು, ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಕರ್ನಾಟಕದ ಮಂಡ್ಯ ಜಿಲ್ಲೆಯ ಬಿ. ಜಿ. ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಎರಡನೇ ದಿನದಂದು, ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಬೆಂಗಳೂರಿನಲ್ಲಿ ನಡೆಯಲಿರುವ "ನಮ ಶಿವಾಯ" ಪಾರಾಯಣ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
 
ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಕರ್ನಾಟಕದ ರಾಜಭವನಕ್ಕೂ ಭೇಟಿ ನೀಡಲಿದ್ದಾರೆ.

 

*****


(Release ID: 2067784) Visitor Counter : 73