ಪ್ರಧಾನ ಮಂತ್ರಿಯವರ ಕಛೇರಿ
ರಷ್ಯಾ ಒಕ್ಕೂಟದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
Posted On:
22 OCT 2024 10:32PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 16ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಇಂದು ಕಜಾನ್ ನಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದರು. ಈ ವರ್ಷ ಇದು ಅವರ ಎರಡನೇ ಭೇಟಿಯಾಗಿದ್ದು, ಜುಲೈ 2024ರಲ್ಲಿ ನಡೆದ 22ನೇ ವಾರ್ಷಿಕ ಶೃಂಗಸಭೆಯ ಸಂದರ್ಭದಲ್ಲಿ ಉಭಯ ನಾಯಕರು ಈ ಹಿಂದೆ ಮಾಸ್ಕೋದಲ್ಲಿ ಭೇಟಿಯಾಗಿದ್ದರು.
16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿದ್ದಕ್ಕಾಗಿ ಪ್ರಧಾನಮಂತ್ರಿಯವರು ಅಧ್ಯಕ್ಷ ಪುಟಿನ್ ಅವರಿಗೆ ಧನ್ಯವಾದ ಅರ್ಪಿಸಿದರು. ಬ್ರಿಕ್ಸ್ ನ ರಷ್ಯಾದ ಅಧ್ಯಕ್ಷ ಸ್ಥಾನ ಮತ್ತು ಬಹುಪಕ್ಷೀಯತೆಯನ್ನು ಬಲಪಡಿಸಲು, ಸುಸ್ಥಿರ ಅಭಿವೃದ್ಧಿಯನ್ನು ಮುನ್ನಡೆಸಲು ಮತ್ತು ಜಾಗತಿಕ ಆಡಳಿತ ಸುಧಾರಣೆಗೆ ಒತ್ತು ನೀಡುವ ಪ್ರಯತ್ನಗಳನ್ನು ಅವರು ಶ್ಲಾಘಿಸಿದರು. ಉಭಯ ನಾಯಕರು ರಾಜಕೀಯ, ಆರ್ಥಿಕ, ರಕ್ಷಣೆ, ಇಂಧನ ಮತ್ತು ಜನರ ನಡುವಿನ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಅಪೇಕ್ಷಿಸಿದರು. 2024ರ ನವೆಂಬರ್ ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ವ್ಯಾಪಾರ, ಆರ್ಥಿಕ ಮತ್ತು ಸಾಂಸ್ಕೃತಿಕ ವಿಷಯಗಳ ಕುರಿತಾದ ಭಾರತ–ರಷ್ಯಾ ಅಂತರ ಸರ್ಕಾರಿ ಆಯೋಗದ ಮುಂಬರುವ ಸಭೆಯಲ್ಲಿ ಭೇಟಿ ಮಾಡುವ ಸಂದರ್ಭವನ್ನು ಅವರು ನೆನಪಿಸಿಕೊಂಡರು.
ಉಭಯ ನಾಯಕರು ಬಹುಪಕ್ಷೀಯ ವೇದಿಕೆಗಳಲ್ಲಿ, ವಿಶೇಷವಾಗಿ ಬ್ರಿಕ್ಸ್ ನಲ್ಲಿ ಭಾರತ-ರಷ್ಯಾ ಎರಡೂ ದೇಶಗಳ ಕಾರ್ಯಕ್ರಮಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷ ಸೇರಿದಂತೆ ಪರಸ್ಪರ ಹಿತಾಸಕ್ತಿಯ ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಉಭಯ ನಾಯಕರು ಅಭಿಪ್ರಾಯಗಳನ್ನು ಹಂಚಿಕೊಂಡರು. ಸಂಘರ್ಷಗಳನ್ನು ಪರಿಹರಿಸುವಲ್ಲಿ ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಮುಂದಿನ ಮಾರ್ಗವಾಗಿದೆ ಎಂದು ಪ್ರಧಾನಿಯವರು ಪುನರುಚ್ಚರಿಸಿದರು.
ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ಹಿನ್ನೆಲೆಯಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡು, ಸ್ಥಿತಿಸ್ಥಾಪಕತ್ವವನ್ನು ತೋರಿಸಿರುವ ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಇಬ್ಬರೂ ನಾಯಕರು ಒಪ್ಪಿಕೊಂಡರು.
23ನೇ ವಾರ್ಷಿಕ ಶೃಂಗಸಭೆಗಾಗಿ ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವಂತೆ ಪ್ರಧಾನಮಂತ್ರಿಯವರು ಅಧ್ಯಕ್ಷ ಪುಟಿನ್ ಅವರನ್ನು ಆಹ್ವಾನಿಸಿದರು.
*****
(Release ID: 2067926)
Visitor Counter : 11
Read this release in:
English
,
Urdu
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam