ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ರಾಯ್ ಪುರದ ಏಮ್ಸ್‌ ನಲ್ಲಿ  ನಡೆದ ಘಟಿಕೋತ್ಸವದಲ್ಲಿ ರಾಷ್ಟ್ರಪತಿಗಳು ಭಾಗವಹಿಸಿದ್ದರು

Posted On: 25 OCT 2024 2:35PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 25, 2024) ರಾಯ್ ಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಯ  ಎರಡನೇ ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ಕಡಿಮೆ ವೆಚ್ಚದಲ್ಲಿ ಉತ್ತಮ ಆರೋಗ್ಯ ಸೇವೆ ಮತ್ತು ವೈದ್ಯಕೀಯ ಶಿಕ್ಷಣ ನೀಡಲು ಏಮ್ಸ್ ಹೆಸರುವಾಸಿಯಾಗಿದೆ. ಜನರ ನಂಬಿಕೆಯು ಏಮ್ಸ್ ನೊಂದಿಗೆ ಸಂಬಂಧ ಹೊಂದಿದೆ. ಅದಕ್ಕಾಗಿಯೇ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯಲು ಎಲ್ಲೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಾರೆ. ಏಮ್ಸ್ ರಾಯ್ ಪುರ ಕೆಲವೇ ವರ್ಷಗಳಲ್ಲಿ ಸಾಕಷ್ಟು ಖ್ಯಾತಿಯನ್ನು ಗಳಿಸಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಏಮ್ಸ್ ರಾಯ್ ಪುರ ವೈದ್ಯಕೀಯ ಚಿಕಿತ್ಸೆ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಹೇಳಿದರು. ಮುಂಬರುವ ದಿನಗಳಲ್ಲಿ ಈ ಸಂಸ್ಥೆಯು ಜನಕಲ್ಯಾಣ ಕಾರ್ಯದಲ್ಲಿ ಮತ್ತಷ್ಟು ವಿಸ್ತಾರಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೈದ್ಯರನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ಶ್ರೀಮಂತರಿಗೆ ಹಲವು ಆಯ್ಕೆಗಳಿರಬಹುದು ಆದರೆ ಹಿಂದುಳಿದವರ ಭರವಸೆ ಅವರ ಮೇಲೆ ನಿಂತಿದೆ ಎಂದು ಹೇಳಿದರು. ಎಲ್ಲಾ ಜನರಿಗೆ, ವಿಶೇಷವಾಗಿ ಬಡವರು ಮತ್ತು ದುರ್ಬಲ ವರ್ಗದವರಿಗೆ ಸೇವೆ ಸಲ್ಲಿಸಲು ಅವರು ಸಲಹೆ ನೀಡಿದರು.

ವೈದ್ಯಕೀಯ ವೃತ್ತಿಪರರ ಕೆಲಸವು ಅತ್ಯಂತ ಜವಾಬ್ದಾರಿಯುತವಾಗಿದೆ ಎಂದು ರಾಷ್ಟ್ರಪತಿಗಳು ವೈದ್ಯರಿಗೆ ತಿಳಿಸಿದರು.  ಅವರ ನಿರ್ಧಾರಗಳು ಸಾಮಾನ್ಯವಾಗಿ ಜೀವಗಳನ್ನು ಉಳಿಸುವುದರೊಂದಿಗೆ ಸಂಬಂಧ ಹೊಂದಿವೆ. ವೈದ್ಯಕೀಯ ವೃತ್ತಿಪರರಾಗಿ, ಆಗಾಗ್ಗೆ ಸವಾಲಿನ ಸಂದರ್ಭಗಳನ್ನು ಎದುರಿಸುತ್ತಾರೆ. ಈ ಸವಾಲುಗಳನ್ನು ಎದುರಿಸಲು ತಮ್ಮ ಭಾವನೆಗಳನ್ನು ನಿಯಂತ್ರಿಸಿಕೊಳ್ಳುವುದನ್ನು ಕಲಿಯುವಂತೆ  ಅವರು ಸಲಹೆ ನೀಡಿದರು.

ವಿದ್ಯಾರ್ಥಿಯಿಂದ ವೃತ್ತಿ ಜೀವನಕ್ಕೆ ಕಾಲಿಡುತ್ತಿರುವುದು ಪ್ರಮುಖ ಬದಲಾವಣೆಯಾಗಿದೆ ಎಂದು ರಾಷ್ಟ್ರಪತಿಗಳು ಹೇಳಿದರು. ಪದವಿ ಪಡೆದ ವೈದ್ಯರಿಗೆ ತಮ್ಮ ಜ್ಞಾನವನ್ನು ಬೆಳೆಸಿಕೊಳ್ಳಲು ಸಲಹೆ ನೀಡಿದರು. ಸದಾ ಹೊಸತನ್ನು ಕಲಿಯುವ ಮನೋಭಾವನೆ ಅವರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ರಾಷ್ಟ್ರಪತಿಗಳ ಭಾಷಣವನ್ನು ನೋಡಲು ದಯವಿಟ್ಟು ಇಲ್ಲಿ ಕ್ಲಿಕ್ ಮಾಡಿ -

 

*****




(Release ID: 2068719) Visitor Counter : 10