ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಬೋಟ್ಸ್ವಾನಾದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಡುಮಾ ಬೊಕೊ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

Posted On: 03 NOV 2024 12:59PM by PIB Bengaluru

ಬೋಟ್ಸ್ವಾನಾದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಡುಮಾ ಬೊಕೊ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. ಪ್ರಧಾನಮಂತ್ರಿಅವರು ತಮ್ಮ ಸಾಮಾಜಿಕ ಜಾಲತಾಣ X ಸಂದೇಶದಲ್ಲಿ ಹೊಸದಾಗಿ ಚುನಾಯಿತ ಅಧ್ಯಕ್ಷರ ಯಶಸ್ವಯಾಗಿ ಅಧಿಕಾರಾವಧಿಯನ್ನು ಪೂರೈಸಲಿದ್ದಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು ಮತ್ತು ಬೋಟ್ಸ್ವಾನದೊಂದಿಗೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಭಾರತದ ಬದ್ಧತೆಯನ್ನು ಬಲವಾಗಿ ಪ್ರತಿಪಾದಿಸಿದರು.  

ಪ್ರಧಾನಮಂತ್ರಿ ಅವರು ತಮ್ಮ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಬೋಟ್ಸ್ವಾನಾದ ಅಧ್ಯಕ್ಷರಾಗಿ ಆಯ್ಕೆಯಾದ @duma_boko ಅವರಿಗೆ ಅಭಿನಂದನೆಗಳು. ಅಧಿಕಾರಾವಧಿ ಯಶಸ್ವಿಗೊಳಿಸಲು ಶುಭಾಶಯಗಳು. ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ಎದುರುನೋಡುತ್ತಿದ್ದೇವೆ.

 

 

*****


(Release ID: 2070590) Visitor Counter : 31