ಪ್ರಧಾನ ಮಂತ್ರಿಯವರ ಕಛೇರಿ
ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಭಾರತದ ಪ್ರಗತಿಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
प्रविष्टि तिथि:
03 NOV 2024 3:33PM by PIB Bengaluru
ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಭಾರತದ ಪ್ರಯತ್ನಗಳ ಮಹತ್ವವನ್ನು ಗುರುತಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿಬಿ ಸಂಭವವನ್ನು ತಗ್ಗಿಸುವಲ್ಲಿ ರಾಷ್ಟ್ರದ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯು 2015 ರಿಂದ 2023 ರವರೆಗೆ ಕ್ಷಯರೋಗವನ್ನು ಶೇ.17.7 ರಷ್ಟು ತಗ್ಗಿಸುವಲ್ಲಿ ಭಾರತದ ಗಮನಾರ್ಹ ಪ್ರಗತಿಯನ್ನು ಗುರುತಿಸಿ ಕೇಂದ್ರ ಆರೋಗ್ಯ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರ ಮಾಡಿದ್ದ ಪೋಸ್ಟ್‌ಗೆ ಪ್ರತಿಕ್ರಿಯಿಸಿ ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣದ X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಶ್ಲಾಘನೀಯ ಪ್ರಗತಿ! ಟಿಬಿ ಸಂಭವದಲ್ಲಿನ ಇಳಿಕೆಯು ಭಾರತದ ಬದ್ಧತೆ ಮತ್ತು ನವೀನ ಪ್ರಯತ್ನಗಳ ಫಲಿತಾಂಶವಾಗಿದೆ. ಸಾಮೂಹಿಕ ಮನೋಭಾವದ ಮೂಲಕ, ನಾವು ಟಿಬಿ-ಮುಕ್ತ ಭಾರತಕ್ಕಾಗಿ ಕೆಲಸ ಮಾಡುತ್ತಲೇ ಇರುತ್ತೇವೆ’’.
*****
(रिलीज़ आईडी: 2070591)
आगंतुक पटल : 99
इस विज्ञप्ति को इन भाषाओं में पढ़ें:
Assamese
,
English
,
Urdu
,
Marathi
,
हिन्दी
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam