ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಲ್ಮೋರಾ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.) ಯಿಂದ ಪರಿಹಾರವನ್ನು ಘೋಷಿಸಿದ್ದಾರೆ

Posted On: 04 NOV 2024 1:19PM by PIB Bengaluru

ಉತ್ತರಾಖಂಡದ ಅಲ್ಮೋರಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳು ಮತ್ತು ಪ್ರೀತಿಪಾತ್ರರಿಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. 

ಸಾಮಾಜಿಕ ಮಾಧ್ಯಮದಲ್ಲಿ @PMOIndia ಮೂಲಕ ಹಂಚಿಕೊಂಡ ಹೇಳಿಕೆಯಲ್ಲಿ, “ಅಪಘಾತದಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂಬ ಹಾರೈಕೆಗಳ ಜೊತೆಗೆ ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಮಂತ್ರಿಯವರು ತಮ್ಮ ದುಃಖವನ್ನು ತಿಳಿಸಿದ್ದಾರೆ.

"ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದ ದುರದೃಷ್ಟಕರ ರಸ್ತೆ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಪ್ರಧಾನಮಂತ್ರಿಯವರು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

ಇದರ ಜೊತೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಪಘಾತದಲ್ಲಿ ಮೃತರಾದ ಪ್ರತಿಯೊಬ್ಬರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ರೂ. 2 ಲಕ್ಷ ಹಾಗೂ ಗಾಯಾಳುಗಳಿಗೆ ರೂ. 50,000ಗಳ ಪರಿಹಾರವನ್ನು ಘೋಷಿಸಿದ್ದಾರೆ.

 

 

*****


(Release ID: 2070592) Visitor Counter : 22