ಪ್ರಧಾನ ಮಂತ್ರಿಯವರ ಕಛೇರಿ
ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ದಾಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಖಂಡನೆ
ಭಾರತದ ಸಂಕಲ್ಪ ಇಂತಹ ಹಿಂಸಾಚಾರ ಕೃತ್ಯಗಳಿಂದ ಎಂದಿಗೂ ದುರ್ಬಲಗೊಳ್ಳುವುದಿಲ್ಲ; ಕೆನಡಾ ಸರ್ಕಾರ ನ್ಯಾಯ ಖಾತರಿಪಡಿಸಿ ಕಾನೂನು ಎತ್ತಿ ಹಿಡಿಯಲಿದೆ ಎಂಬ ನಿರೀಕ್ಷೆ ಇದೆ: ಪ್ರಧಾನಮಂತ್ರಿ
प्रविष्टि तिथि:
04 NOV 2024 8:33PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲೆ ಇತ್ತೀಚೆಗೆ ನಡೆದ ದಾಳಿ ಹಾಗೂ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಪ್ರಯತ್ನಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಭಾರತದ ದೃಢ ಸಂಕಲ್ಪವನ್ನು ಒತ್ತಿಹೇಳುತ್ತಾ, ಕೆನಡಾದ ಸರ್ಕಾರವು ನ್ಯಾಯ ದೊರಕಿಸಲಿ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯಲಿ ಎಂದು ಕರೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಹೇಳಿಕೆ ಹೀಗಿದೆ:
"ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ಉದ್ದೇಶಪೂರ್ವಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು ಕೂಡ ಅಷ್ಟೇ ಭಯಾನಕವಾಗಿದೆ. ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾ ಸರ್ಕಾರವು ನ್ಯಾಯವನ್ನು ಖಾತರಿಪಡಿಸಲಿದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯಲಿದೆ ಎಂದು ನಾವು ನಿರೀಕ್ಷಿಸುತ್ತೇವೆ."
*****
(रिलीज़ आईडी: 2070727)
आगंतुक पटल : 61
इस विज्ञप्ति को इन भाषाओं में पढ़ें:
Odia
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Tamil
,
Telugu
,
Malayalam