ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ಯು.ಎಸ್. ಅಧ್ಯಕ್ಷೀಯ ಚುನಾವಣೆಯಲ್ಲಿ ಶ್ರೀ ಡೊನಾಲ್ಡ್ ಟ್ರಂಪ್ ಅವರ ವಿಜಯಕ್ಕಾಗಿ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ 
                    
                    
                        
                    
                
                
                    Posted On:
                06 NOV 2024 1:57PM by PIB Bengaluru
                
                
                
                
                
                
                ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಇಂದು ಐತಿಹಾಸಿಕ ಜಯ ಸಾಧಿಸಿದ ಶ್ರೀ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಭಾರತ-ಯು.ಎಸ್. ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸಲು ಸಹಯೋಗವನ್ನು ನವೀಕರಿಸಲು ತಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯ ಸಂದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ:
"ಐತಿಹಾಸಿಕ ಚುನಾವಣಾ ಗೆಲುವಿಗಾಗಿ ಸ್ನೇಹಿತ @realDonaldTrump ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅವಧಿಯ ಯಶಸ್ಸಿನ ಮೇಲೆ ನೀವು ನಿರ್ಮಿಸುತ್ತಿರುವಂತೆ, ಭಾರತ-ಯು.ಎಸ್. ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಹಯೋಗವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಜನರ ಸುಧಾರಣೆ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು, ನಾವು ಒಟ್ಟಾಗಿ ಕೆಲಸ ಮಾಡೋಣ.
 
 
*****
 
                
                
                
                
                
                (Release ID: 2071123)
                Visitor Counter : 98
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Manipuri 
                    
                        ,
                    
                        
                        
                            Urdu 
                    
                        ,
                    
                        
                        
                            Marathi 
                    
                        ,
                    
                        
                        
                            हिन्दी 
                    
                        ,
                    
                        
                        
                            Assamese 
                    
                        ,
                    
                        
                        
                            Bengali-TR 
                    
                        ,
                    
                        
                        
                            Bengali 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam