ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹರ್ದೋಯಿ ರಸ್ತೆ ಅಪಘಾತದಲ್ಲಿ ಸಾವು-  ಪ್ರಧಾನಮಂತ್ರಿ ಸಂತಾಪ


ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ – ಪ್ರಧಾನಮಂತ್ರಿ ಘೋಷಣೆ

Posted On: 06 NOV 2024 5:59PM by PIB Bengaluru

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮತ್ತು ಪ್ರೀತಿಪಾತ್ರರಿಗೆ ಸಂತಾಪ ಸೂಚಿಸಿದ್ದಾರೆ.  ಸಾಮಾಜಿಕ ಮಾಧ್ಯಮ @PMOIndia ದಲ್ಲಿ ತಮ್ಮ ಹೇಳಿಕೆ ಹಂಚಿಕೊಂಡಿರುವ ಅವರು, ಈ ಅಪಘಾತದಿಂದ ಬಾಧಿತರಾದ ಕುಟುಂಬಗಳಿಗೆ ತಮ್ಮ ಶೋಕವನ್ನು ವ್ಯಕ್ತಪಡಿಸಿದ್ದು ಅಪಘಾತದಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. 

ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಂಭವಿಸಿದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದೆ.  ಈ ದುರ್ಘಟನೆಯಲ್ಲಿ ಅನೇಕ ಕುಟುಂಬಗಳು ತಮ್ಮ ಆತ್ಮೀಯರನ್ನು ಕಳೆದುಕೊಂಡಿವೆ. ಈ ಅತೀವ ದುಃಖವನ್ನು ಭರಿಸುವ ಶಕ್ತಿಯನ್ನು ನೀಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಜೊತೆಗೆ ಎಲ್ಲಾ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.  ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತಿದೆ” ಎಂದು ಪ್ರಧಾನಮಂತ್ರಿ @narendramodi ಹೇಳಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ/ ವಾರಸುದಾರರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ- ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.   ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.

 

 

*****


(Release ID: 2071786) Visitor Counter : 30