ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶ್ರೀ ಎಲ್ ಕೆ ಅಡ್ವಾಣಿ ಅವರ ಜನ್ಮದಿನಕ್ಕೆ ಪ್ರಧಾನಮಂತ್ರಿ ಶುಭಾಶಯ

Posted On: 08 NOV 2024 8:50PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಎಲ್ ಕೆ ಅಡ್ವಾಣಿ ಅವರ ಜನ್ಮದಿನದಂದು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲು ತಮ್ಮನ್ನು ಸಮರ್ಪಿಸಿಕೊಂಡಿರುವ ಶ್ರೀ ಎಲ್ ಕೆ ಅಡ್ವಾಣಿ ಅವರು ದೇಶದ ಅತ್ಯಂತ ಮೆಚ್ಚಿನ ರಾಜನೀತಿಜ್ಞರಲ್ಲಿ ಒಬ್ಬರು ಎಂದು ಪ್ರಧಾನಮಂತ್ರಿಯವರು ಬಣ್ಣಿಸಿದ್ದಾರೆ.  

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಎಲ್ ಕೆ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮದಿನದ ಶುಭ ಕೋರಿದರು.

ಪ್ರಧಾನಮಂತ್ರಿ ಗಳ ಎಕ್ಸ್ ಪೋಸ್ಟ್ ಹೀಗಿದೆ:

"ಶ್ರೀ ಎಲ್.ಕೆ. ಅಡ್ವಾಣಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರು ನಮ್ಮ ರಾಷ್ಟ್ರಕ್ಕೆ ಮಾಡಿರುವ ಅತ್ಯುತ್ತಮ ಸೇವೆಗಾಗಿ ಅವರಿಗೆ ಭಾರತ ರತ್ನ ಗೌರವವನ್ನು ಈ ವರ್ಷ ನೀಡಲಾಗಿರುವುದರಿಂದ ಈ ವರ್ಷ  ವಿಶೇಷವಾಗಿದೆ. ಭಾರತದ ಅಚ್ಚುಮೆಚ್ಚಿನ ರಾಜಕಾರಣಿಯಾಗಿರುವ ಅವರು ಭಾರತವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ತಮ್ಮ ಬುದ್ಧಿವಂತಿಕೆ ಮತ್ತು ಸಮೃದ್ಧ ಆಳ ಚಿಂತನೆಗಳಿಗಾಗಿ ಸದಾ  ಗೌರವಾನ್ವಿತರಾಗಿದ್ದಾರೆ. ಹಲವಾರು ವರ್ಷಗಳ‌ ಕಾಲ ಅವರ ಮಾರ್ಗದರ್ಶನವನ್ನು  ಪಡೆದ ನಾನು‌ ಧನ್ಯ.  ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.

 

ಅವರ ನಿವಾಸಕ್ಕೆ ತೆರಳಿ ಅವರಿಗೆ ಜನ್ಮ ದಿನದ ಶುಭ ಕೋರಿದೆ.”

 

 

*****


(Release ID: 2072083) Visitor Counter : 23