ಪ್ರಧಾನ ಮಂತ್ರಿಯವರ ಕಛೇರಿ
ರಷ್ಯಾದ ಪ್ರಥಮ ಉಪ ಪ್ರಧಾನಮಂತ್ರಿಯಾದ ಡೆನಿಸ್ ಮಾಂಟುರೊವ್ ಅವರು ಪ್ರಧಾನಮಂತ್ರಿ ಮೋದಿ ಅವರನ್ನು ಭೇಟಿಯಾದರು
ವ್ಯಾಪಾರ ಮತ್ತು ಆರ್ಥಿಕ ಸಂಬಂಧ, ಇಂಧನ, ಸಂಪರ್ಕದಲ್ಲಿ ಸಹಕಾರವನ್ನು ಹೆಚ್ಚಿಸುವ ಬಗ್ಗೆ ಉಭಯ ನಾಯಕರು ಅಭಿಪ್ರಾಯಗಳನ್ನು ಹಂಚಿಕೊಂಡರು
ಮಾಸ್ಕೋ ಮತ್ತು ಕಜಾನ್ ನಲ್ಲಿ ಅಧ್ಯಕ್ಷ ಪುಟಿನ್ ಅವರೊಂದಿಗೆ ತಮ್ಮ ಇತ್ತೀಚಿನ ಭೇಟಿಗಳಲ್ಲಿ ಕೈಗೊಂಡ ನಿರ್ಧಾರಗಳ ಅನುಷ್ಠಾನದ ಪ್ರಯತ್ನಗಳನ್ನು ಪ್ರಧಾನಮಂತ್ರಿಯವರು ಸ್ವಾಗತಿಸಿದರು
ಅಧ್ಯಕ್ಷರಾದ ಪುಟಿನ್ ಅವರಿಗೆ ಪ್ರಧಾನಮಂತ್ರಿಯವರು ಆತ್ಮೀಯ ಶುಭಾಶಯಗಳನ್ನು ತಿಳಿಸಿದರು
Posted On:
11 NOV 2024 8:55PM by PIB Bengaluru
ರಷ್ಯಾ ಒಕ್ಕೂಟದ ಮೊದಲ ಉಪ ಪ್ರಧಾನ ಮಂತ್ರಿಯಾದ ಘನತೆವೆತ್ತ ಡೆನಿಸ್ ಮಾಂಟುರೊವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ವ್ಯಾಪಾರ ಮತ್ತು ಆರ್ಥಿಕ ಸಂಬಂಧ, ಇಂಧನ, ಸಂಪರ್ಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಳದ ಬಗ್ಗೆ ಉಭಯ ನಾಯಕರು ತಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ಭಾರತ ಹಾಗೂ ರಷ್ಯಾ ದೇಶಗಳ ವಿಶೇಷ ಮತ್ತು ಖಾಸಗಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಅಧ್ಯಕ್ಷ ಪುಟಿನ್ ಅವರೊಂದಿಗಿನ ಇತ್ತೀಚಿನ ಭೇಟಿಗಳಲ್ಲಿ ತೆಗೆದುಕೊಂಡ ನಿರ್ಧಾರಗಳ ಅನುಷ್ಠಾನಕ್ಕಾಗಿ ಉಭಯ ತಂಡಗಳು ಮಾಡುತ್ತಿರುವ ನಿರಂತರ ಜಂಟಿ ಪ್ರಯತ್ನಗಳನ್ನು ಪ್ರಧಾನಮಂತ್ರಿ ಮೋದಿಯವರು ಸ್ವಾಗತಿಸಿದರು.
ಪ್ರಧಾನಮಂತ್ರಿಯವರು ಅಧ್ಯಕ್ಷ ಪುಟಿನ್ ಅವರಿಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿ, ಅವರೊಂದಿಗೆ ನಿರಂತರ ಸಹಕಾರ ವಿನಿಮಯವನ್ನು ನಿರೀಕ್ಷಿಸುವುದಾಗಿ ಹೇಳಿದರು.
*****
(Release ID: 2072694)
Visitor Counter : 17
Read this release in:
English
,
Urdu
,
Marathi
,
Hindi
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam