ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತದ ರಾಷ್ಟ್ರಪತಿಗಳು ಸ್ವಾಮಿ ವಿವೇಕಾನಂದ ವಿದ್ಯಾ ಮಂದಿರವನ್ನು ಉದ್ಘಾಟಿಸಿದರು ಮತ್ತು ಸಿಲ್ವಾಸ್ಸಾದಲ್ಲಿ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಭಾಷಣ

Posted On: 13 NOV 2024 1:25PM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಸ್ವಾಮಿ ವಿವೇಕಾನಂದ ವಿದ್ಯಾ ಮಂದಿರ, ಝಂಡಾ ಚೌಕ್ ಅನ್ನು ಉದ್ಘಾಟಿಸಿದರು ಮತ್ತು ಇಂದು (ನವೆಂಬರ್ 13, 2024) ಸಿಲ್ವಾಸ್ಸಾ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯುವಿನಲ್ಲಿ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು ಜನರು ಸ್ವಾಗತಿಸಿದ ಆತ್ಮೀಯತೆ ಸದಾ ನೆನಪಿನಲ್ಲಿ ಉಳಿಯುತ್ತದೆ. ಆತ್ಮೀಯ ಸ್ವಾಗತ ಕೋರಿದ್ದಕ್ಕಾಗಿ ಈ ಕೇಂದ್ರಾಡಳಿತ ಪ್ರದೇಶದ ಜನರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಝಂಡಾ ಚೌಕ್ ಶಾಲೆಯನ್ನು ಉದ್ಘಾಟಿಸಲು ಸಂತೋಷವಾಗಿದೆ. ಉನ್ನತ ಶಿಕ್ಷಣವನ್ನು ಉತ್ತೇಜಿಸಲು ಕೇಂದ್ರಾಡಳಿತ ಪ್ರದೇಶದ ಆಡಳಿತವು ಅನೇಕ ಪ್ರಯತ್ನಗಳನ್ನು ಮಾಡಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಒದಗಿಸಲು 2018ರಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಪ್ರಾರಂಭಿಸಲಾಯಿತು ಮತ್ತು NIFT ಅನ್ನು 2022ರಲ್ಲಿ ಸ್ಥಾಪಿಸಲಾಯಿತು. ಈ ಪ್ರಯತ್ನಗಳು ಕೇಂದ್ರಾಡಳಿತ ಪ್ರದೇಶದ ಯುವಕರಿಗೆ ಉತ್ತಮ ಅವಕಾಶವನ್ನು ಒದಗಿಸುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಪ್ರದೇಶವು ಶ್ರೀಮಂತ ಐತಿಹಾಸಿಕ, ಸಾಂಸ್ಕೃತಿಕ ಮತ್ತು ನೈಸರ್ಗಿಕ ಪರಂಪರೆಯನ್ನು ಹೊಂದಿದೆ. ಈ ಕಾರಣದಿಂದಾಗಿ, ದಾದ್ರಾ, ನಗರ ಹವೇಲಿ, ದಮನ್ ಮತ್ತು ದಿಯು ಉತ್ತಮ ಪ್ರವಾಸಿ ತಾಣಗಳಾಗಿವೆ. ಪ್ರವಾಸೋದ್ಯಮ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಕೈಗೊಂಡ ಕ್ರಮಗಳನ್ನು ಗಮನಾರ್ಹ. ಪ್ರವಾಸೋದ್ಯಮ ವಿಸ್ತರಣೆಯು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ವಿವಿಧ ಪ್ರದೇಶಗಳ ಜನರೊಂದಿಗೆ ಭೇಟಿಯಾಗುವುದು ನಮ್ಮನ್ನು ಹೆಚ್ಚು ಉದಾರ ಮತ್ತು ಸಂವೇದನಾಶೀಲರನ್ನಾಗಿ ಮಾಡುತ್ತದೆ ಎಂದು ರಾಷ್ಟ್ರಪತಿಗಳು ತಿಳಿಸಿದರು.

ರಾಷ್ಟ್ರಪತಿಗಳ ಭಾಷಣವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

*****


(Release ID: 2073236) Visitor Counter : 16