ಗೃಹ ವ್ಯವಹಾರಗಳ ಸಚಿವಾಲಯ
ಮಣಿಪುರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭದ್ರತಾ ಪಡೆಗಳಿಗೆ ನಿರ್ದೇಶಿಸಲಾಗಿದೆ
Posted On:
16 NOV 2024 2:23PM by PIB Bengaluru
ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಭದ್ರತಾ ಸನ್ನಿವೇಶವು ದುರ್ಬಲವಾಗಿದೆ. ಸಂಘರ್ಷದಲ್ಲಿರುವ ಎರಡೂ ಸಮುದಾಯಗಳ ಸಶಸ್ತ್ರ ದುಷ್ಕರ್ಮಿಗಳು ಹಿಂಸಾಚಾರದಲ್ಲಿ ತೊಡಗಿದ್ದು, ದುರದೃಷ್ಟಕರ ಪ್ರಾಣಹಾನಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುತ್ತಿದ್ದಾರೆ. ಶಾಂತಿ ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಭದ್ರತಾ ಪಡೆಗಳಿಗೆ ನಿರ್ದೇಶಿಸಲಾಗಿದೆ. ಹಿಂಸಾತ್ಮಕ ಮತ್ತು ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪರಿಣಾಮಕಾರಿ ತನಿಖೆಗಾಗಿ ಪ್ರಮುಖ ಪ್ರಕರಣಗಳನ್ನು ಎನ್ಐಎಗೆ ಹಸ್ತಾಂತರಿಸಲಾಗಿದೆ.
ಸಾರ್ವಜನಿಕರು ಶಾಂತಿ ಕಾಪಾಡಬೇಕು, ವದಂತಿಗಳನ್ನು ನಂಬಬಾರದು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಭದ್ರತಾ ಪಡೆಗಳೊಂದಿಗೆ ಸಹಕರಿಸಬೇಕು ಎಂದು ಕೋರಲಾಗಿದೆ.
*****
(Release ID: 2073938)
Visitor Counter : 4