ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರಿಂದ ನಾರ್ವೆ ಪ್ರಧಾನಮಂತ್ರಿ ಭೇಟಿ
Posted On:
19 NOV 2024 6:06AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಿ20 ಶೃಂಗಸಭೆಯ ನೇಪಥ್ಯದಲ್ಲಿ ರಿಯೊ ಡಿ ಜನೈರೊದಲ್ಲಿ ನಾರ್ವೆಯ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೊನಸ್ ಗಹರ್ ಸ್ಟೋರ್ ಅವರನ್ನು ಭೇಟಿ ಮಾಡಿದ್ದರು.
ಇಬ್ಬರೂ ಪ್ರಧಾನಮಂತ್ರಿಗಳು ದ್ವಿಪಕ್ಷೀಯ ಸಂಬಂಧಗಳಲ್ಲಿನ ಪ್ರಗತಿಯನ್ನು ಪರಿಶೀಲನೆ ನಡೆಸಿದರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಮಾರ್ಗೋಪಾಯಗಳ ಕುರಿತು ಚರ್ಚಿಸಿದರು. ದ್ವಿಪಕ್ಷೀಯ ಸಂಬಂಧಗಳಲ್ಲಿ ಭಾರತ – ಐರೋಪ್ಯ ಮುಕ್ತ ವ್ಯಾಪಾರ ಒಕ್ಕೂಟ (ಯುರೋಪಿಯನ್ ಫ್ರೀ ಟ್ರೇಡ್ ಅಸೋಸಿಯೇಷನ್ )-ವ್ಯಾಪಾರ ಮತ್ತು ಆರ್ಥಿಕ ಪಾಲುದಾರಿಕೆ ಒಪ್ಪಂದ (ಇಂಡಿಯಾ-ಇಎಫ್ಟಿಎ-ಟಿಇಪಿಎ)ಗೆ ಸಹಿ ಹಾಕುವಿಕೆ ಅತ್ಯಂತ ಪ್ರಮುಖ ಮೈಲಿಗಲ್ಲಾಗಿದ್ದು, ಉಭಯ ನಾಯಕರು ನಾರ್ವೆ ಸೇರಿದಂತೆ ಇಎಫ್ ಟಿಎ ರಾಷ್ಟ್ರಗಳಿಂದ ಭಾರತಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸಲು ಅದರ ಮಹತ್ವವನ್ನು ಪುನರುಚ್ಚರಿಸಿದರು.
ನೀಲಿ ಆರ್ಥಿಕತೆ, ನವೀಕರಿಸಬಹುದಾದ ಇಂಧನ, ಹಸಿರು ಜಲಜನಕ, ಸೌರ ಮತ್ತು ಪವನ ವಿದ್ಯುತ್ ಯೋಜನೆಗಳು, ಜಿಯೋ-ಥರ್ಮಲ್ ಎನರ್ಜಿ, ಗ್ರೀನ್ ಶಿಪ್ಪಿಂಗ್, ಕಾರ್ಬನ್ ಕ್ಯಾಪ್ಚರ್ ಯುಟಿಲೈಸೇಶನ್ ಮತ್ತು ಸ್ಟೋರೇಜ್ (ಸಿಸಿಯುಎನ್), ಮೀನುಗಾರಿಕೆ, ಬಾಹ್ಯಾಕಾಶ ಮತ್ತು ಆರ್ಕ್ಟಿಕ್‌ನಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ವೃದ್ಧಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ಚರ್ಚೆಗಳಲ್ಲಿ ಗಮನಹರಿಸಲಾಯಿತು.
ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆಯೂ ಚರ್ಚಿಸಿದರು.
*****
(Release ID: 2074539)
Visitor Counter : 4