ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರಿಂದ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿಯವರ ಭೇಟಿ
Posted On:
22 NOV 2024 3:29AM by PIB Bengaluru
ಗಯಾನಾದ ಜಾರ್ಜ್‌ಟೌನ್ ನಲ್ಲಿ 2ನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ಜೊತೆಜೊತೆಯಲ್ಲಿ ನವೆಂಬರ್ 20 ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿ ಶ್ರೀ ಗ್ಯಾಸ್ಟನ್ ಬ್ರೌನ್ ಅವರನ್ನು ಭೇಟಿಯಾದರು.
ಅಭಿವೃದ್ಧಿ ಹೊಂದುತ್ತಿರುವ ಕಿರು ದ್ವೀಪ ರಾಷ್ಟ್ರಗಳು (ಎಸ್ ಐ ಡಿ ಎಸ್) ಗಾಗಿ ಸಾಮರ್ಥ್ಯ ನಿರ್ಮಾಣ ಹಾಗೂ ವ್ಯಾಪಾರ ಮತ್ತು ಹೂಡಿಕೆ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ಕುರಿತು ಉಭಯ ನಾಯಕರು ಚರ್ಚಿಸಿದರು. ಭಾರತ- ಕ್ಯಾರಿಕಾಮ್ ಪಾಲುದಾರಿಕೆಯನ್ನು ಬಲಪಡಿಸಲು ಪ್ರಧಾನಮಂತ್ರಿಗಳ ಏಳು ಅಂಶಗಳ ಯೋಜನೆಯನ್ನು ಪ್ರಧಾನಿ ಬ್ರೌನ್ ಶ್ಲಾಘಿಸಿದರು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ಬೆಂಬಲವನ್ನು ಅವರು ಪುನರುಚ್ಚರಿಸಿದರು.
*****
(Release ID: 2078489)
Visitor Counter : 27
Read this release in:
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Malayalam