ಪ್ರಧಾನ ಮಂತ್ರಿಯವರ ಕಛೇರಿ
ಮಕ್ಕಳು ತಮ್ಮ ಸಾಮರ್ಥ್ಯವನ್ನು ಕಂಡುಕೊಳ್ಳಲು ಮತ್ತು ಉತ್ತಮ ವ್ಯಕ್ತಿಗಳಾಗಿ ಬೆಳೆಯಲು ನೆರವಾಗಲು ಔಪಚಾರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರೀಡೆಯನ್ನು ಸಂಯೋಜಿಸಲು ಒತ್ತು ನೀಡಬೇಕು: ಪ್ರಧಾನಮಂತ್ರಿ
Posted On:
29 NOV 2024 3:10PM by PIB Bengaluru
ಕೇಂದ್ರ ರಾಜ್ಯ ಸಚಿವರಾದ ಶ್ರೀ ಜಯಂತ್ ಸಿಂಗ್ ಅವರು ಬರೆದ ಲೇಖನವನ್ನು ಓದುವಂತೆ ಜನರನ್ನು ಒತ್ತಾಯಿಸಿದ ಪ್ರಧಾನಮಂತ್ರಿಯವರು, ಕ್ರೀಡೆಯನ್ನು ಔಪಚಾರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಸಂಯೋಜಿಸುವುದರಿಂದ ಮಕ್ಕಳು ತಮ್ಮ ಸಾಮರ್ಥ್ಯವನ್ನು ಕಂಡುಕೊಳ್ಳಲು ಮತ್ತು ಉತ್ತಮ ವ್ಯಕ್ತಿಗಳಾಗಿ ಬೆಳೆಯಲು ಸಹಾಯಕವಾಗುತ್ತದೆ ಎಂದು ಒತ್ತಿ ಹೇಳಿದರು.
ಕೇಂದ್ರ ರಾಜ್ಯ ಸಚಿವರಾದ ಶ್ರೀ ಜಯಂತ್ ಸಿಂಗ್ ಅವರ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿ ಹೀಗೆ ಹೇಳಿದ್ದಾರೆ:
"ಮಕ್ಕಳು ತಮ್ಮ ಸಾಮರ್ಥ್ಯವನ್ನು ಕಂಡುಕೊಳ್ಳಲು ಮತ್ತು ಉತ್ತಮ ವ್ಯಕ್ತಿಗಳಾಗಿ ಬೆಳೆಯಲು ಸಹಾಯ ಮಾಡಲು ಔಪಚಾರಿಕ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರೀಡೆಯನ್ನು ಸಂಯೋಜಿಸುವ ಮಹತ್ವವನ್ನು ಕೇಂದ್ರ ಸಚಿವ ಶ್ರೀ @jayantrld ಅವರು ಒತ್ತಿ ಹೇಳಿದ್ದಾರೆ. ಓದಿ.
*****
(Release ID: 2079085)
Visitor Counter : 6