ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ್ ಶಿಂಧೆ ಮತ್ತು ಶ್ರೀ ಅಜಿತ್ ಪವಾರ್ ಅವರನ್ನು ಕೂಡಾ ಪ್ರಧಾನಮಂತ್ರಿಯವರು ಅಭಿನಂದಿಸಿದರು
ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ಬೆಂಬಲದ ಭರವಸೆ
Posted On:
05 DEC 2024 8:44PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ್ ಶಿಂಧೆ ಮತ್ತು ಶ್ರೀ ಅಜಿತ್ ಪವಾರ್ ಅವರನ್ನು ಅವರು ಕೂಡಾ ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಶ್ರೀ ಮೋದಿಯವರು ಭರವಸೆ ನೀಡಿದ್ದಾರೆ.
ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:
"ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಜಿ ಅವರಿಗೆ ಅಭಿನಂದನೆಗಳು.
ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ್ ಶಿಂಧೆ ಜಿ ಮತ್ತು ಶ್ರೀ ಅಜಿತ್ ಪವಾರ್ ಜಿ ಅವರಿಗೆ ಕೂಡಾ ನನ್ನ ಅಭಿನಂದನೆಗಳು.
ಈ ತಂಡವು ಅನುಭವ ಮತ್ತು ಸೃಜನಶೀಲತೆಯ ಮಿಶ್ರಣವಾಗಿದೆ. ಈ ತಂಡದ ಸಾಮೂಹಿಕ ಪ್ರಯತ್ನಗಳಿಂದಾಗಿ ಮಹಾಯುತಿ ಮಹಾರಾಷ್ಟ್ರದಲ್ಲಿ ಐತಿಹಾಸಿಕ ಜನಾದೇಶವನ್ನು ಪಡೆದಿದೆ. ಈ ತಂಡವು ರಾಜ್ಯದ ಜನರ ಆಕಾಂಕ್ಷೆಗಳನ್ನು ಪೂರೈಸಲು ಮತ್ತು ಉತ್ತಮ ಆಡಳಿತವನ್ನು ನೀಡಲು ಸಾಧ್ಯವಿರುವ ಎಲ್ಲಾ ಪ್ರಯತ್ನವನ್ನೂ ಮಾಡುತ್ತದೆ.
ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ಬೆಂಬಲದ ಭರವಸೆ ನಾನು ನೀಡುತ್ತೇನೆ" ಎಂದು ಹೇಳಿದರು.
*****
(Release ID: 2081780)
Visitor Counter : 11
Read this release in:
Odia
,
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam