ಗೃಹ ವ್ಯವಹಾರಗಳ ಸಚಿವಾಲಯ
'ಫೆಂಗಲ್' ಚಂಡಮಾರುತದಿಂದ ಹಾನಿಗೊಳಗಾದ ಜನರಿಗೆ ಸಹಾಯ ಮಾಡಲು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎಸ್ ಡಿ ಆರ್ ಎಫ್) ಕೇಂದ್ರ ಪಾಲಾಗಿ ತಮಿಳುನಾಡು ರಾಜ್ಯ ಸರ್ಕಾರಕ್ಕೆ 944.80 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಎಂಎಚ್ಎ ಅನುಮೋದನೆ ನೀಡಿದೆ
ನೈಸರ್ಗಿಕ ವಿಪತ್ತುಗಳಿಂದ ಬಾಧಿತವಾದ ರಾಜ್ಯಗಳ ಜನರು ಎದುರಿಸುತ್ತಿರುವ ಕಷ್ಟಗಳನ್ನು ತಗ್ಗಿಸುವಲ್ಲಿ ಮೋದಿ ಸರ್ಕಾರವು ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ
'ಫೆಂಗಲ್' ಚಂಡಮಾರುತ ಪೀಡಿತ ತಮಿಳುನಾಡು ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಿಗೆ ಹಾನಿಯನ್ನು ಸ್ಥಳದಲ್ಲೇ ಮೌಲ್ಯಮಾಪನ ಮಾಡುವುದಕ್ಕಾಗಿ ಅಂತರ ಸಚಿವಾಲಯದ ಕೇಂದ್ರ ತಂಡವನ್ನು (ಐಎಂಸಿಟಿ) ಕಳುಹಿಸಲಾಗಿದೆ
ಐಎಂಸಿಟಿಗಳ ಮೌಲ್ಯಮಾಪನ ವರದಿಗಳನ್ನು ಸ್ವೀಕರಿಸಿದ ನಂತರ, ಸ್ಥಾಪಿತ ಕಾರ್ಯವಿಧಾನದ ಪ್ರಕಾರ ವಿಪತ್ತು ಪೀಡಿತ ರಾಜ್ಯ / ಕೇಂದ್ರಾಡಳಿತ ಪ್ರದೇಶಕ್ಕೆ ಎನ್ಡಿಆರ್ಎಫ್ನಿಂದ ಹೆಚ್ಚುವರಿ ಆರ್ಥಿಕ ಸಹಾಯವನ್ನು ಅನುಮೋದಿಸಲಾಗುವುದು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಈ ವರ್ಷದಲ್ಲಿ 28 ರಾಜ್ಯಗಳಿಗೆ 21,718.716 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಬಿಡುಗಡೆ ಮಾಡಲಾಗಿದೆ
Posted On:
06 DEC 2024 6:36PM by PIB Bengaluru
2024ರ ನವೆಂಬರ್ 30 ರಂದು ಅಪ್ಪಳಿಸಿದ "ಫೆಂಗಲ್" ಚಂಡಮಾರುತದಿಂದ ಪೀಡಿತ ಜನರಿಗೆ ಪರಿಹಾರ ನೆರವು ಒದಗಿಸುವುದಕ್ಕಾಗಿ ರಾಜ್ಯಕ್ಕೆ ಸಹಾಯ ಮಾಡಲು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (ಎಸ್ ಡಿ ಆರ್ ಎಫ್) ಕೇಂದ್ರ ಪಾಲು 944.80 ಕೋಟಿ ರೂ.ಗಳನ್ನು ತಮಿಳುನಾಡು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಲು ಗೃಹ ಸಚಿವಾಲಯ (ಎಂಎಚ್ಎ) ಅನುಮೋದನೆ ನೀಡಿದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮತ್ತು ಕೇಂದ್ರ ಗೃಹ ಹಾಗು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಮೋದಿ ಸರ್ಕಾರವು ನೈಸರ್ಗಿಕ ವಿಪತ್ತುಗಳಿಂದ ಬಾಧಿತವಾದ ರಾಜ್ಯಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ.
'ಫೆಂಗಲ್' ಚಂಡಮಾರುತ ಪೀಡಿತ ತಮಿಳುನಾಡು ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಿಗೆ ಸ್ಥಳದಲ್ಲೇ ಹಾನಿಯ ಮೌಲ್ಯಮಾಪನಕ್ಕಾಗಿ ಅಂತರ ಸಚಿವಾಲಯದ ಕೇಂದ್ರ ತಂಡವನ್ನು (ಐಎಂಸಿಟಿ) ಕಳುಹಿಸಲಾಗಿದೆ. ಐಎಂಸಿಟಿಗಳ ಮೌಲ್ಯಮಾಪನ ವರದಿಗಳನ್ನು ಸ್ವೀಕರಿಸಿದ ನಂತರ, ಸ್ಥಾಪಿತ ಕಾರ್ಯವಿಧಾನದ ಪ್ರಕಾರ ವಿಪತ್ತು ಪೀಡಿತ ರಾಜ್ಯಗಳಿಗೆ ಎನ್ಡಿಆರ್ಎಫ್ನಿಂದ ಹೆಚ್ಚುವರಿ ಆರ್ಥಿಕ ಸಹಾಯವನ್ನು ಅನುಮೋದಿಸಲಾಗುವುದು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮತ್ತು ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ಈ ವರ್ಷದಲ್ಲಿ ಈಗಾಗಲೇ 28 ರಾಜ್ಯಗಳಿಗೆ 21,718.716 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಎಸ್ ಡಿ ಆರ್ ಎಫ್ ಯಿಂದ 26 ರಾಜ್ಯಗಳಿಗೆ 14878.40 ಕೋಟಿ ರೂ., ಎನ್ಡಿಆರ್ಎಫ್ನಿಂದ 18 ರಾಜ್ಯಗಳಿಗೆ 4808.32 ಕೋಟಿ ರೂ., 11 ರಾಜ್ಯಗಳಿಗೆ ರಾಜ್ಯ ವಿಪತ್ತು ತಗ್ಗಿಸುವ ನಿಧಿಯಿಂದ (ಎಸ್ ಡಿ ಎಂ ಎಫ್) 1385.45 ಕೋಟಿ ರೂ., 07 ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ತಗ್ಗಿಸುವ ನಿಧಿಯಿಂದ (ಎನ್ ಡಿ ಎಂ ಎಫ್) 646.546 ಕೋಟಿ ರೂ. ಆರ್ಥಿಕ ಸಹಾಯ ಸೇರಿದೆ. ಜೊತೆಗೆ, ಕೇಂದ್ರ ಸರ್ಕಾರವು ಎಲ್ಲಾ ಪ್ರವಾಹ / ಚಂಡಮಾರುತ ಪೀಡಿತ ರಾಜ್ಯಗಳಿಗೆ ಅಗತ್ಯ ಎನ್ಡಿಆರ್ಎಫ್ ತಂಡಗಳು, ಸೇನಾ ತಂಡಗಳು ಮತ್ತು ವಾಯುಪಡೆಯ ಬೆಂಬಲ ಸೇರಿದಂತೆ ಎಲ್ಲಾ ಲಾಜಿಸ್ಟಿಕ್ ಸಹಾಯವನ್ನು ಒದಗಿಸಿದೆ.
*****
(Release ID: 2081974)
Visitor Counter : 10