ಪ್ರಧಾನ ಮಂತ್ರಿಯವರ ಕಛೇರಿ
ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ಜೂನಿಯರ್ ಮಹಿಳಾ ಹಾಕಿ ತಂಡವನ್ನು ಪ್ರಧಾನಮಂತ್ರಿ ಅಭಿನಂದಿಸಿದರು
Posted On:
16 DEC 2024 9:23PM by PIB Bengaluru
ಏಷ್ಯಾಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ಜೂನಿಯರ್ ಮಹಿಳಾ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು. ತಂಡದ ಅಗಾಧ ಮನೋಧೈರ್ಯ, ಛಲ, ಶ್ರದ್ಧೆ ಮತ್ತು ಸ್ಥೈರ್ಯವನ್ನು ಅವರು ಶ್ಲಾಘಿಸಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ:
“ಏಷ್ಯಾ ಕಪ್ ಪ್ರಶಸ್ತಿ ಗೆದ್ದ ಭಾರತೀಯ ಜೂನಿಯರ್ ಮಹಿಳಾ ಹಾಕಿ ತಂಡಕ್ಕೆ ಅಭಿನಂದನೆಗಳು. ತಂಡವು ಅಗಾಧವಾದ ಶ್ರದ್ಧೆ ಮತ್ತು ದೃಢತೆಯನ್ನು ತೋರಿಸಿದೆ. ಈ ಯಶಸ್ಸು ಹಾಕಿ ಕ್ರೀಡೆಯ ಬಗ್ಗೆ ವಿಶೇಷವಾಗಿ ಯುವಜನರಲ್ಲಿ ಹೆಚ್ಚುತ್ತಿರುವ ಉತ್ಸಾಹವನ್ನು ತೋರಿಸುತ್ತದೆ. ಅವರುಗಳ ಮುಂದಿನ ಪ್ರಯತ್ನಗಳಿಗಾಗಿ ತಂಡಕ್ಕೆ ನನ್ನ ಶುಭಾಶಯಗಳು. ”
*****
(Release ID: 2085159)
Visitor Counter : 18
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam