ಪ್ರಧಾನ ಮಂತ್ರಿಯವರ ಕಛೇರಿ
ಮುಂಬೈನಲ್ಲಿ ದೋಣಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಣೆ
Posted On:
18 DEC 2024 10:32PM by PIB Bengaluru
ಮಹಾರಾಷ್ಟ್ರದ ಮುಂಬೈನಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ ಐವತ್ತು ಸಾವಿರ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:
“ಮುಂಬೈನಲ್ಲಿ ಸಂಭವಿಸಿದ ದೋಣಿ ದುರಂತ ದುಃಖಕರ. ಮೃತರ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಂಬಂಧಪಟ್ಟ ಆಡಳಿತ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi”
“ಪ್ರಧಾನಿಯವರು ಮುಂಬೈನಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟವರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ. ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ಘೋಷಿಸಿದ್ದಾರೆ."
*****
(Release ID: 2085942)
Visitor Counter : 7
Read this release in:
English
,
Urdu
,
Hindi
,
Marathi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam