ರೈಲ್ವೇ ಸಚಿವಾಲಯ
azadi ka amrit mahotsav

ಕೇಂದ್ರ ಸಚಿವರಾದ ಶ್ರೀ ವಿ ಸೋಮಣ್ಣ ಅವರಿಂದ ಅಡಿಪ್ (ADIP) ಯೋಜನೆಯಡಿ ದಿವ್ಯಾಂಗ ಫಲಾನುಭವಿಗಳಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣೆ

Posted On: 26 DEC 2024 8:26PM by PIB Bengaluru

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಇಂದು ತುಮಕೂರು ಜಿಲ್ಲೆ, ಮಧುಗಿರಿ ತಾಲೂಕು, ಬಡವನಹಳ್ಳಿ ಹೋಬಳಿ ಮತ್ತು ಮಿಡಿಗೇಶಿ ಹೋಬಳಿಗಳ ಪ್ರವಾಸ ಕೈಗೊಂಡಿದ್ದರು.

ಬಡವನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ 9 ಪಂಚಾಯಿತಿಗಳ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಇಲಾಖಾ ಅಧಿಕಾರಿಗಳಿಗೆ ಪರಿಹಾರ ಕ್ರಮಕೈಗೊಳ್ಳಲು ಆದೇಶಿಸಿದರು. ಬೆಳಗ್ಗೆ 10.00 ರಿಂದ 2.00 ಗಂಟೆಯವರೆಗೆ ಬಡವನಹಳ್ಳಿ ಪಂಚಾಯಿತಿ ಆವರಣದಲ್ಲಿ ಆಗಮಿಸಿದ ನೂರಾರು ಸಾರ್ವಜನಿಕರ ಆಹವಾಲುಗಳನ್ನು ಇಲಾಖೆ ಅಧಿಕಾರಿಗಳೊಂದಿಗೆ ಸ್ವೀಕರಿಸಿ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಕ್ರಮ ಜರುಗಿಸಿದ್ದಾರೆ. 

ತದನಂತರ ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ 6 ಪಂಚಾಯಿತಿ ವ್ಯಾಪ್ತಿಯಲ್ಲಿನ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಆಹವಾಲುಗಳನ್ನು ಸ್ವೀಕರಿಸಿ ಅಧಿಕಾರಿಗಳಿಗೆ ಸಾರ್ವಜನಿಕರ ಸಮಸ್ಯೆ ಬಗೆಹರಿಸಲು ಸಲಹೆ ನೀಡಿದ್ದಾರೆ.

 

 

*****

 

 


(Release ID: 2088235) Visitor Counter : 36