ಗೃಹ ವ್ಯವಹಾರಗಳ ಸಚಿವಾಲಯ
ಭಾರತದ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ ಭಾರತ ಸರ್ಕಾರ
ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ 26.12.2024 ರಿಂದ 01.01.2025 ರವರೆಗೆ ಭಾರತದಾದ್ಯಂತ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ದಿವಂಗತ ಡಾ.ಮನಮೋಹನ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
Posted On:
27 DEC 2024 3:05AM by PIB Bengaluru
ಭಾರತದ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರು ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ 26.12.2024 ರಂದು ನಿಧನರಾಗಿರುವುದಕ್ಕೆ ಭಾರತ ಸರ್ಕಾರ ತೀವ್ರ ಶೋಕ ವ್ಯಕ್ತಪಡಿಸಿದೆ.
ಅಗಲಿದ ಗಣ್ಯರಿಗೆ ಗೌರವಾರ್ಥವಾಗಿ 26.12.2024 ರಿಂದ 01.01.2025 ರವರೆಗೆ ಎರಡೂ ದಿನಗಳನ್ನು ಒಳಗೊಂಡಂತೆ ಭಾರತದಾದ್ಯಂತ ಏಳು ದಿನಗಳ ರಾಷ್ಟ್ರೀಯ ಶೋಕವನ್ನು ಆಚರಿಸಲು ನಿರ್ಧರಿಸಲಾಗಿದೆ. ಈ ಅವಧಿಯಲ್ಲಿ ರಾಷ್ಟ್ರಧ್ವಜವನ್ನು ಭಾರತದಾದ್ಯಂತ ಮಾಮೂಲಿ ಹಾರಿಸುತ್ತಿದ್ದಕ್ಕಿಂತ ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಮತ್ತು ರಾಷ್ಟ್ರೀಯ ಶೋಕಾಚರಣೆಯ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ದಿವಂಗತ ಡಾ.ಮನಮೋಹನ್ ಸಿಂಗ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ.
ವಿದೇಶದಲ್ಲಿರುವ ಎಲ್ಲಾ ಭಾರತೀಯ ರಾಯಭಾರ ಕಚೇರಿಗಳು/ಹೈ ಕಮಿಷನ್‌ಗಳಲ್ಲಿ ಅಂತ್ಯಕ್ರಿಯೆಯ ದಿನದಂದು ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು.
*****
(Release ID: 2088333)
Visitor Counter : 28
Read this release in:
Tamil
,
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Telugu
,
Malayalam