ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ


ಡಾ. ಮನಮೋಹನ್ ಸಿಂಗ್  ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್‌ನಿಂದ ಹಿಡಿದು ದೇಶದ ಹಣಕಾಸು ಸಚಿವ ಸ್ಥಾನದವರೆಗೆ ಮತ್ತು ಪ್ರಧಾನಿಯಾಗಿ ದೇಶದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ

ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು

ವಾಹೆಗುರು ಅವರ ಆತ್ಮಕ್ಕೆ ಮೋಕ್ಷ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ

Posted On: 26 DEC 2024 11:10PM by PIB Bengaluru

ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.  

ಕೇಂದ್ರ ಗೃಹ ಸಚಿವರು ತಮ್ಮ ಸಾಮಾಜಿಕ ತಾಲತಾಣ  'X' ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಅತ್ಯಂತ ದುಃಖಕರವಾಗಿದೆ ಎಂದು ಹೇಳಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಸ್ಥಾನದಿಂದ ಹಿಡಿದು ದೇಶದ ಹಣಕಾಸು ಸಚಿವ ಹಾಗೂ ಪ್ರಧಾನಮಂತ್ರಿ ಸ್ಥಾನದವರೆಗೆ ಡಾ.ಮನಮೋಹನ್ ಸಿಂಗ್ ಜಿ ಅವರು ದೇಶದ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು. ಈ ದುಃಖದ ಸಮಯದಲ್ಲಿ ಡಾ. ಮನಮೋಹನ್ ಸಿಂಗ್ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಶ್ರೀ ಶಾ ಅವರು ತಮ್ಮ ಸಂತಾಪ ವ್ಯಕ್ತಪಡಿಸಿದರು. ವಾಹೆಗುರು ಜಿ ಅವರ ಆತ್ಮಕ್ಕೆ ಮೋಕ್ಷ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.

 

 

 

*****

 


(Release ID: 2088361) Visitor Counter : 8


Read this release in: English , Urdu , Hindi , Punjabi