ಪ್ರಧಾನ ಮಂತ್ರಿಯವರ ಕಛೇರಿ
ಅಮೆರಿಕದ ಮಾಜಿ ಅಧ್ಯಕ್ಷರಾದ ಶ್ರೀ ಜಿಮ್ಮಿ ಕಾರ್ಟರ್ ಅವರ ನಿಧನಕ್ಕೆ ಪ್ರಧಾನಮಂತ್ರಿಯವರಿಂದ ಸಂತಾಪ
Posted On:
30 DEC 2024 2:13PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಮೆರಿಕದ ಮಾಜಿ ಅಧ್ಯಕ್ಷರಾದ ಶ್ರೀ ಜಿಮ್ಮಿ ಕಾರ್ಟರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Xನ ಪೋಸ್ಟ್ ನಲ್ಲಿ, ಅವರು:
"ಅಮೆರಿಕದ ಮಾಜಿ ಅಧ್ಯಕ್ಷರಾದ ಜಿಮ್ಮಿ ಕಾರ್ಟರ್ ಅವರ ನಿಧನವು ನನಗೆ ತೀವ್ರ ದುಃಖ ತಂದಿದೆ. ಮಹಾನ್ ದೂರದೃಷ್ಟಿಯ ರಾಜನೀತಿಜ್ಞರಾಗಿದ್ದ ಅವರು ಜಾಗತಿಕ ಶಾಂತಿ ಮತ್ತು ಸಾಮರಸ್ಯಕ್ಕಾಗಿ ದಣಿಯದೆ ದುಡಿದಿದ್ದಾರೆ. ಪ್ರಬಲವಾದ ಭಾರತ-ಯು.ಎಸ್. ಸಂಬಂದವನ್ನು ಬೆಳೆಸುವಲ್ಲಿ ಅವರ ಕೊಡುಗೆ ಅಪಾರ. ಅವರ ಕುಟುಂಬ, ಸ್ನೇಹಿತರು ಮತ್ತು ಯುಎಸ್ ಜನರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ದೇವರು ಅವರಿಗೆ ಚಿರಶಾಂತಿಯನ್ನು ನೀಡಲಿ" ಎಂದು ಟ್ವೀಟ್ ಮಾಡಿದ್ದಾರೆ.
*****
(Release ID: 2089007)
Visitor Counter : 17
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam