ಪ್ರಧಾನ ಮಂತ್ರಿಯವರ ಕಛೇರಿ
ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರದ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
Posted On:
02 JAN 2025 10:20AM by PIB Bengaluru
ಸಂಪರ್ಕ ರಹಿತ ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದರು.
ಎಕ್ಸ್ ತಾಣದಲ್ಲಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ರೀತಿ ಬರೆದಿದ್ದಾರೆ:
"ದೂರದ ಪ್ರದೇಶಗಳಲ್ಲಿ ಮತ್ತು ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಮಾಡಿರುವ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ. ಇದು ಖಂಡಿತವಾಗಿಯೂ 'ಜೀವನದ ಸೌಲಭ್ಯ ಹಾಗೂ ಸೌಕರ್ಯ'ವನ್ನು ಹೆಚ್ಚಿಸುತ್ತದೆ ಮತ್ತು ಇನ್ನಷ್ಟು ಪ್ರಗತಿಗೆ ದಾರಿ ಮಾಡಿಕೊಡುತ್ತದೆ. 'ಗಡ್ಚಿರೋಲಿ' ಮತ್ತು ಸುತ್ತಮುತ್ತಲಿನ ಪ್ರದೇಶಗಳ ನನ್ನ ಸಹೋದರಿಯರು ಮತ್ತು ಸಹೋದರರಿಗೆ ವಿಶೇಷ ಅಭಿನಂದನೆಗಳು !"
"दुर्गम आणि माओवादग्रस्त भागाचा सर्वांगीण विकास करण्यासाठी महाराष्ट्र सरकार करत असलेल्या प्रयत्नांचे मी कौतुक करतो. यामुळे जीवन सुलभतेला निश्चितच चालना मिळेल आणि आणखी प्रगती साधण्याचा मार्ग प्रशस्त होईल. गडचिरोली आणि त्याच्या आजूबाजूच्या प्रदेशातील माझ्या बंधू भगिनींचे विशेष अभिनंदन !"
*****
(Release ID: 2089562)
Visitor Counter : 20
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam